ಕನ್ನಡ ಕರಾವಳಿ ಸುದ್ದಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ, ಬೈಂದೂರು ವಲಯ ಕುಂದಾಪುರ ತಾಲೂಕು, ಉಡುಪಿ ಜಿಲ್ಲೆ ಇಲ್ಲಿನ ನೂತನ ಹಳೆ ವಿದ್ಯಾರ್ಥಿ ಸಂಘದ ರಚನೆ ದಿನಾಂಕ 10.08.2025 ಭಾನುವಾರ ಬೆಳಿಗ್ಗೆ 10 ಗಂಟೆಗೆ ಶಾಲೆಯ ಸುಬ್ರಹ್ಮಣ್ಯ ಮಂಜರ ಸಭಾಭವನದಲ್ಲಿ ನಡೆಯಲಿದೆ.
ಜ್ಞಾನದೇಗುಲವಾದ ಶಾಲೆಯ ಶ್ರೇಯೋಭಿವೃದ್ಧಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಅದರ ಕಾರ್ಯಕಾರಿಣಿ ಸಮಿತಿಯ ರಚನೆಯಲ್ಲಿ ಪಾಲ್ಗೊಳ್ಳಬೇಕಾಗಿ ವಿನಂತಿಸುವ,
ಶ್ರೀ ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್, ಶಾಲಾ SDMC, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.