ರಾಜಕೀಯ
ಅಗಸ್ಟ್ 15ರ ಬಳಿಕ ಪ್ರತಿಪಕ್ಷದ ನಾಯಕರ ಆಯ್ಕೆ: ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Views: 0
ಕರ್ನಾಟಕ ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಪ್ರತಿಪಕ್ಷ ನಾಯಕರನ್ನು ಆಯ್ಕೆ ಕುರಿತು ಅಗಸ್ಟ್ 15 ರ ನಂತರ ನಿರ್ಧಾರ ಕೈಗೊಳ್ಳುವುದಾಗಿ ಪಕ್ಷದ ವರಿಷ್ಠರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ನಗರದಲ್ಲಿ ಗುರುವಾರ ಅವರು ಮಾತನಾಡಿ, ಸಂಸತ್ ಅಧಿವೇಶನದ ವೇಳೆ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದೆ, ಆಗ ಕೇಂದ್ರ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ದಾ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇನೆ. ಆಗ ವರಿಷ್ಠರಿಂದ ಭರವಸೆ ದೊರತಿದೆ.
ಲೋಕಸಭೆ ಚುನಾವಣೆಯ ಸಿದ್ಧತೆ, ಕಾಂಗ್ರೆಸ್ ಸರಕಾರದ ಆಡಳಿತ ವೈಖರಿ, ಸರಕಾರದ ಬಗ್ಗೆ ಜನರ ಅಭಿಪ್ರಾಯ, ಮುಂದಿನ ಹೋರಾಟದ ರೂಪುರೇಷೆ ಸಿದ್ದಪಡಿಸುವ ಕುರಿತು ಚರ್ಚೆ ಮಾಡಿದ್ದೇನೆ.
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಅವರು ಹೇಳಿದರು.






