ರಾಜಕೀಯ
ಅಗಸ್ಟ್ 27ರಂದು ಗ್ರಹಲಕ್ಷ್ಮಿ ಯೋಜನೆಗೆ ಚಾಲನೆ

Views: 0
ಎಲ್ಲರ ಅನುಕೂಲಕ್ಕೆ ಅನುಗುಣವಾಗಿ ಅಗಸ್ಟ್ 20ರ ಬದಲಿಗೆ ಅಗಸ್ಟ್ 27ರಂದು ರಾಜ್ಯದ 11 ಸಾವಿರ ಕಡೆಗಳಲ್ಲಿ ಗ್ರಹಲಕ್ಷ್ಮಿ ಯೋಜನೆಗೆ ಬೃಹತ್ ಮಟ್ಟದಲ್ಲಿ ಚಾಲನೆ ನೀಡಲು ತೀರ್ಮಾನಿಸಿದ್ದೇವೆ ಎಂದು ರಾಜ್ಯದ ಉಪ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಹೇಳಿದ್ದಾರೆ.
ಅವರು ಗ್ರಹಲಕ್ಷ್ಮಿ ಯೋಜನೆ ಕುರಿತು ಸಭೆ ಬಳಿಕ ವಿಕಾಸ ಸೌಧದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಪಂಚಾಯತಿಯಲ್ಲಿ ನೇರ ಪ್ರಸಾರವಾಗಲಿದೆ.ಪ್ರತಿ ಪಂಚಾಯತಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಪ್ರತಿ ವಾರ್ಡಿನಲ್ಲಿ ಸಂಭ್ರಮ ಆಚರಣೆ ಮಾಡುವಂತೆ ಸೂಚಿಸಿದ್ದೇವೆ.
ಈ ಯೋಜನೆಯಲ್ಲಿ 1.05 ಕೋಟಿ ಫಲಾನುಭವಿಗಳಿಗೆ ಅಗಸ್ಟ್ ತಿಂಗಳ ಹಣ ಖಾತೆಗೆ ಜಮೆ ಆಗಲಿದೆ. ರಾಜ್ಯದ ನಾನಾ ಕಡೆ ಅನೇಕ ಹೆಣ್ಣು ಮಕ್ಕಳು ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಬರುವ ದಿನ ಮನೆಯ ಮುಂದೆ ಹೆಣ್ಣು ಮಕ್ಕಳು ರಂಗೋಲಿ ಹಾಕಿ ಸಂಭ್ರಮ ಆಚರಣೆ ಮಾಡಲಿದ್ದಾರೆ ಎಂದರು.






