ಇತರೆ

ಅಜ್ಜಿ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವೇಳೆ ಮೂರು ವರ್ಷದ ಮಗು ಹೊಂಡಕ್ಕೆ ಬಿದ್ದು ಸಾವು

Views: 0

ಮೂರು ವರ್ಷದ ಮಗುವೊಂದು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ಯಲ್ಲಿ ನಡೆದಿದೆ.

ಮೃತಪಟ್ಟ ಮಗು ಕೃತಿಕ( 3 )ಎಂದು ಗುರುತಿಸಲಾಗಿದೆ.

ಕೃತಿಕ ತನ್ನ ಅಜ್ಜಿಯೊಂದಿಗೆ ನಡೆದುಕೊಂಡು ಹೋಗುತ್ತಿರುವ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದಿದೆ ಎಂದು ತಿಳಿದು ಬಂದಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!