ಅಣ್ಣನೊಂದಿಗೆ ತೆರಳುತ್ತಿದ್ದ ಯುವತಿಯನ್ನು ಹೊತ್ತೊಯ್ದು ರೇಪ್!

Views: 243
ಕನ್ನಡ ಕರಾವಳಿ ಸುದ್ದಿ: ಅಣ್ಣನೊಂದಿಗೆ ತೆರಳುತ್ತಿದ್ದ ಯುವತಿಯನ್ನು ಹೊತ್ತೊಯ್ದು ರೇಪ್ ಮಾಡಿರುವ ಹೇಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ.
ಕಳೆದ ಮಧ್ಯರಾತ್ರಿ ಈ ಘಟನೆ ನಡೆದಿದೆ. ಯುವತಿ ರೈಲಿನಲ್ಲಿ ಬಂದು ಕೆಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾಳೆ. ಅಲ್ಲಿಂದ ಮಹಾದೇವ ಪುರಕ್ಕೆ ಅಣ್ಣನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಇಬ್ಬರು ಯುವಕರು ಅಡ್ಡಗಟ್ಟಿದ್ದಾರೆ. ಅಣ್ಣನ ಮೇಲೆ ಹಲ್ಲೆ ನಡೆಸಿ, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ರೇಪ್ ಮಾಡಿದ್ದಾರೆ.
ಇದನ್ನು ನೋಡಿದ ಸ್ಥಳೀಯರೊಬ್ಬರು ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಓರ್ವ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಆತ ನೀಡಿದ ಮಾಹಿತ ಆಧರಿಸಿ ಮತ್ತೊರ್ವ ಯುವಕನನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ನಂತರ ಇಬ್ಬರನ್ನೂ ಬಂಧಿಸಲಾಗಿದೆ. ಆಸೀಫ್ ಮತ್ತು ಸೈಯದ್ ಎನ್ನುವ ಇಬ್ಬರು ಬಂಧಿತರು. ಇವರು ಆಟೋ ಚಾಲಕರಾಗಿದ್ದು, ಕೋಲಾರದ ಮುಳಬಾಗಿಲು ಮೂಲದವರು. ಯುವತಿ ಬಿಹಾರ ಮೂಲದವಳು ಎಂದು ಗೊತ್ತಾಗಿದೆ.
ಪೊಲೀಸ್ ಆಯುಕ್ತ ದಯಾನಂದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಂತಹ ಕೃತ್ಯ ನಡೆದಿರುವುದು ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.