ಶಿಕ್ಷಣ

ಅತಿಥಿ ಉಪನ್ಯಾಸಕರಿಲ್ಲದೆ ನಡೆಯದ ಸರಕಾರಿ ಪದವಿ ಕಾಲೇಜುಗಳು: ಪ್ರತಿಭಟನೆ ಎಚ್ಚರಿಕೆ ನೀಡಿದ ವಿದ್ಯಾರ್ಥಿಗಳು 

Views: 1

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಾಡಿಯಲ್ಲಿ ಬರುವ ಪದವಿ ಕಾಲೇಜುಗಳು ಶೈಕ್ಷಣಿಕ ವರ್ಷದ ತರಗತಿಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಇನ್ನೂ ಸರಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಆಗದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಪಾಠ ಪ್ರವಚನಗಳು ನಡೆಯದೇ ತೊಂದರೆ ಅನುಭವಿಸುವಂತಾಗಿದೆ.

ಅಗಷ್ಟ 23 ರಿಂದ ತರಗತಿಗಳು ಆರಂಭವಾಗಿದ್ದು ಗ್ರಾಮೀಣ ಪ್ರದೇಶದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಖಾಯಂ ಉಪನ್ಯಾಸಕರು ಇರುವುದರಿಂದ ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ ಆದರೆ ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಸರಕಾರ ಅತಿಥಿ ಉಪನ್ಯಾಸಕರನ್ನು ಸರಿಯಾದ ಸಮಯಕ್ಕೆ ನೇಮಕಾತಿ ಮಾಡಿಕೊಳ್ಳದೆ ಇರುವುದರಿಂದ ಸರಕಾರಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ಸಾವಿರಾರು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತಿದೆ.

ಖಾಸಗಿ ಕಾಲೇಜುಗಳಲ್ಲಿ ವಿಶ್ವವಿದ್ಯಾಲಯದ ವೇಳಾಪಟ್ಟಿಯಂತೆ ತರಗತಿಗಳು ನಡೆದು ಪರೀಕ್ಷೆಗೆ ಸಿದ್ಧತೆ ನಡೆಯುತ್ತಿದ್ದು ಆದರೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲವು ವಿಷಯಗಳ ತರಗತಿಗಳು ಇನ್ನೂ ಆರಂಭವಾಗಿಲ್ಲ. ಮುಂಬರುವ ಸೆಮಿಸ್ಟರ್ ಪರೀಕ್ಷೆ ಡಿಸೆಂಬರ್ ತಿಂಗಳಲ್ಲಿ ಆರಂಭವಾಗುವುದರಿಂದ ಆ ವೇಳೆ ಪಾಠ ಪ್ರವಚನಗಳು ಪೂರ್ಣ ಪ್ರಮಾಣದಲ್ಲಿ ಮುಗಿದಿರುವುದಿಲ್ಲ.ಮುಂಬರುವ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದಷ್ಟು ಬೇಗ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳದೆ ಇದ್ದರೇ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸರಕಾರಿ ಕಾಲೇಜಿನಲ್ಲಿ ಕಡಿಮೆ ಶುಲ್ಕ ಇರುವುದರಿಂದ ಸರಕಾರಿ ಕಾಲೇಜಿಗೆ ಸೇರಿದ್ದು ಆದರೆ ಈಗ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವುದರಿಂದ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆಗುತ್ತಿಲ್ಲ. ಸರ್ಕಾರ ಬೇಗನೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಂಡರೆ ಉತ್ತಮವಾಗುತ್ತದೆ

-ಪವನ್ , ಪ್ರಥಮ ವರ್ಷದ ವಿದ್ಯಾರ್ಥಿ.

Related Articles

Back to top button