ಇತರೆ

ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ

Views: 289

ಹಾಸನ:ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.

ಮೃತರನ್ನು ಹಾಸನದ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಚನ್ನರಾಯಪಟ್ಟಣದ ಸೋಮಶೇಖರ್ ಹಾಗೂ ಭಾಗ್ಯ ದಂಪತಿ ಪುತ್ರಿ ದೀಪಾ (34) ಎಂದು ಗುರುತಿಸಲಾಗಿದೆ.

ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿ ಆಗಿ ಸೇವೆ ಸಲ್ಲಿಸುತ್ತಿದ್ದಳು. ಆದರೆ, ಇಂದು ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಕುಟುಂಬಸ್ಥರಲ್ಲಿ ಆಘಾತ ತಂದೊಡ್ಡಿದೆ

Related Articles

Back to top button
error: Content is protected !!