ಅತಿಯಾದ ಫಾಸ್ಟ್ ಫುಡ್ ಸೇವನೆ, ಆರೋಗ್ಯ ತೀವ್ರ ಹದಗೆಟ್ಟು ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Views: 126
ಕನ್ನಡ ಕರಾವಳಿ ಸುದ್ದಿ: ಅತಿಯಾದ ಫಾಸ್ಟ್ ಫುಡ್ ಸೇವನೆಯಿಂದ ವಿಧ್ಯಾರ್ಥಿನಿ ಅನಾರೋಗ್ಯಕ್ಕೀಡಾಗಿ ಸಾವನಪ್ಪಿದ ಆತಂಕಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಅಹನಾ ಎಂದು ಗುರುತಿಲಾಗಿದೆ.
ದೀರ್ಘಕಾಲದ ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ ಅಹಾನಾಳ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು. ವೈದ್ಯಕೀಯ ತಂಡದ ಪ್ರಕಾರ, ಆಕೆಯ ಕರುಳುಗಳು ಒಟ್ಟಿಗೆ ಅಂಟಿಕೊಂಡಿದ್ದವು. ಜೀರ್ಣಾಂಗ ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗಿತ್ತು. ಆಕೆಗೆ ಶಸ್ತ್ರಚಿಕಿತ್ಸೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ತಿಳಿದುಬಂದಿದೆ.
ನವೆಂಬರ್ 28 ರಂದು ಅಹಾನಾ ತೀವ್ರ ಹೊಟ್ಟೆ ನೋವು ಎಂದು ಹೇಳಿದಾಗ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿದ್ದರು. ವೈದ್ಯಕೀಯ ಪರೀಕ್ಷೆಗಳಲ್ಲಿ ಅವರ ಕರುಳಿಗೆ ಹಾನಿಯಾಗಿದೆ, ಹೊಟ್ಟೆಯಲ್ಲಿ ದ್ರವ ಸಂಗ್ರಹವಾಗಿದೆ ಎಂದು ತಿಳಿದುಬಂದಿತ್ತು. ಈ ಸಮಯದಲ್ಲಿ ಅವರ ಹೊಟ್ಟೆಯಿಂದ ಸುಮಾರು ಏಳು ಲೀಟರ್ ದ್ರವವನ್ನು ತೆಗೆದುಹಾಕಲಾಯಿತು.
ಅಹಾನಾಳನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಯಿತು. ಅಲ್ಲಿ ವೈದ್ಯರು ಅವರ ಕರುಳುಗಳು ಒಟ್ಟಿಗೆ ಅಂಟಿಕೊಂಡಿವೆ ಎಂದು ಪರೀಕ್ಷೆಯಿಂದ ಕಂಡುಕೊಂಡರು. ಚಿಕಿತ್ಸೆ ಮುಂದುವರೆಯಿತು, ಆದರೆ ಆಕೆಯ ಆರೋಗ್ಯ ಸ್ಥಿತಿ ಹದಗೆಡುತ್ತಲೇ ಇತ್ತು. ಡಿಸೆಂಬರ್ 21 ರಂದು ತಡರಾತ್ರಿ, ಆರೋಗ್ಯ ತೀವ್ರವಾಗಿ ಹದಗೆಟ್ಟು ತೀವ್ರ ಹೃದಯಾಘಾತದಿಂದ ಅಹನಾ ನಿಧನಳಾದಳು.
ಅಹಾನಾ ಬಾಲ್ಯದಿಂದಲೂ ಚೌಮಿನ್, ಪಿಜ್ಜಾ ಮತ್ತು ಬರ್ಗ‌್ರಗಳಂತಹ ಫಾಸ್ಟ್ ಫುಡ್‌ಗಳನ್ನು ಇಷ್ಟಪಡುತ್ತಿದ್ದಳು. ಹೊರಗಿನ ಆಹಾರವನ್ನೇ ಹೆಚ್ಚು ಸೇವಿಸುತ್ತಿದ್ದಳು, ಮನೆಯ ಆಹಾರ ಆಕೆಗೆ ರುಚಿಸುತ್ತಿರಲಿಲ್ಲ. ಈ ಅಭ್ಯಾಸವು ಅಂತಿಮವಾಗಿ ಗಂಭೀರ ಆರೋಗ್ಯ ಸಮಸ್ಯೆಗೆ ಕಾರಣವಾಗಿದೆ.






