ರಾಜಕೀಯ

ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು 5 ಕೋಟಿ ಕೇಳಿದ ಸಿಎಂ ಪತ್ನಿ ಮೇಲೆ ಬಹಿರಂಗ ಆರೋಪ! 

Views: 17

ಕನ್ನಡ ಕರಾವಳಿ ಸುದ್ದಿ: ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಪತ್ನಿ ಗುರುಪ್ರೀತ್ ಕೌರ್ 5 ಕೋಟಿ ರೂ. ಕೇಳಿದ್ದಾರೆ ಎಂದು ಪಂಜಾಬ್-ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ರಂಜಿತ್ ಸಿಂಗ್ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ದೂರುದಾರರೊಬ್ಬರು ನ್ಯಾಯಾಲಯದ ಗಮನಕ್ಕೆ ತಂದ ನಂತರ ಆಗಸ್ಟ್ 21ರ ಕೋರ್ಟ್ ನಡಾವಳಿಯಲ್ಲಿ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಪ್ರಕರಣದ ತನಿಖೆ ನಡೆಸಿ 2 ವಾರಗಳೊಳಗೆ ಕ್ರಮ ಕೈಗೊಂಡಿರುವ ವರದಿ ಸಲ್ಲಿಸುವಂತೆ ಪಂಜಾಬ್ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ಆದೇಶ ನೀಡಿದೆ.

5 ಕೋಟಿ ರೂ. ನೀಡಿದ್ದಲ್ಲಿ ಅತ್ಯಾಚಾರದ ಪ್ರಕರಣ ಮುಚ್ಚಿ ಹಾಕುವುದಾಗಿ ಗುರುಪ್ರೀತ್ ಕೌರ್ ಹೇಳಿದ್ದರೆಂದು ಎನ್‌ಎಚ್‌ಆರ್‌ಸಿ ಸದಸ್ಯ ಕನೂಂಗೋ ವಿವರಿಸಿದ್ದಾರೆ. ಈ ವಿಷಯವನ್ನು ಕೇಂದ್ರ ಗೃಹ ಸಚಿವಾಲಯದ ಗಮನಕ್ಕೂ ತಂದಿರುವುದಾಗಿ ಎನ್‌ಎಚ್‌ಆರ್‌ಸಿ ತಿಳಿಸಿದೆ.

ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಂದ ವರದಿ ಬಂದ ಬಳಿಕ ತನಿಖೆ ಮುಂದುವರಿಸುವುದಾಗಿ ಕನೂಂಗೋ ಹೇಳಿದ್ದಾರೆ. ಒತ್ತಡ ಹೇರಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದೂ ಎಚ್ಚರಿಕೆ ನೀಡಿದ್ದಾರೆ.

Related Articles

Back to top button
error: Content is protected !!