ಅನರ್ಹಬಿಪಿಎಲ್ ಕಾರ್ಡ್ ಹೊಂದಿದವರ ಬಗ್ಗೆ ತನಿಖೆ : ಕೆಎಚ್ ಮುನಿಯಪ್ಪ

Views: 0
ಬಾಕಿ ಉಳಿದಿರುವ ಅರ್ಹ ಫಲಾನುಭವಿಗಳಿಗೆ ಇನ್ನೊಂದು ತಿಂಗಳಲ್ಲಿ ಹೊಸ ಬಿಪಿಎಲ್ ಪಡಿತರ ಚೀಟಿ ವಿತರಿಸಲಾಗುವುದು. ಮತ್ತು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದವರ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಎಚ್ ಮುನಿಯಪ್ಪ ಹೇಳಿದರು.
ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕುಟುಂಬಗಳ ಸದಸ್ಯರಿಗೆ 5 ಕೆಜಿ ಹೆಚ್ಚುವರಿ ಬದಲಿಗೆ ತಲಾ 170 ರೂಪಾಯಿ ನಗದು ವರ್ಗಾವಣೆ ಮಾಡಲಾಗಿದೆ. 3.5 ಕೋಟಿ ಫಲಾನುಭವಿಗಳಿಗೆ ಇದರ ಅನುಕೂಲವಾಗಿದೆ. ಸುಮಾರು 2.96 ಲಕ್ಷ ಅರ್ಜಿಗಳು ಬಾಕಿ ಉಳಿದಿದ್ದು, ಸ್ಥಳ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ಚೀಟಿ ವಿತರಿಸಲು ನಿರ್ದೇಶನ ನೀಡಲಾಗಿದೆ.
ಬಿಪಿಎಲ್ ಕಾರ್ಡ್ ಪಡೆದು ಸವಲತ್ತುಗಳನ್ನು ಪಡೆಯುತ್ತಿರುವುದು ತಪ್ಪು. ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆಧಾರ್ ಮತ್ತು ಬ್ಯಾಂಕ್ ಖಾತೆ ಜೋಡಣೆ ಮಾಡದಿರುವುದರಿಂದ 19. 27 ಲಕ್ಷ ಪಡಿತರ ಚೀಟಿಗಳಿಗೆ ಅವರನ್ನು ಈ ಯೋಜನೆ ವ್ಯಾಪ್ತಿಗೆ ತರುವ ಪ್ರಯತ್ನ ನಡೆದಿದೆ ಎಂದರು.






