ಕರಾವಳಿ
ಅನಾರೋಗ್ಯದಿಂದ ಬಳಲುತ್ತಿರುವ ಯುವತಿ ಪ್ರಜ್ಞೆ ತಪ್ಪಿ ಸಾವು

Views: 138
ಪುತ್ತೂರು: ಶಿಶಿಲ ಗ್ರಾಮದ ಪೇರಿಕೆ ನಿವಾಸಿ ಸುಪ್ರೀತಾ(16) ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ಮೃತಪಟ್ಟ ಘಟನೆ ನಡೆದಿದೆ.
ಪೇರಿಕೆಯ ಕೃಷ್ಣಪ್ಪ ಮಲೆಕುಡಿಯ ಮತ್ತು ಸುನಂದಾ ದಂಪತಿಯ ಪುತ್ರಿಯಾಗಿರುವ ಸುಪ್ರೀತಾ ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ.
ಮಂಗಳವಾರ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು ತಕ್ಷಣ ಅವರನ್ನು ಉಪ್ಪಿನಂಗಡಿ ಆಸ್ಪತ್ರೆಗೆ ಕಡೆದೊಯ್ದು ಔಷಧ ಕೊಡಿಸಿದ್ದರು. ಆದರೆ ಬಳಿಕ ಮನೆಗೆ ಹಿಂದಿರುಗುವ ವೇಳೆ ಪ್ರಜ್ಞೆ ತಪ್ಪಿದ್ದರು. ಬಳಿಕ ವೈದ್ಯರ ಬಳಿಗೆ ಕರೆದೊಯ್ದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಮೃತ ಸುಪ್ರೀತಾ ತಂದೆ, ತಾಯಿ ಮತ್ತು ತಮ್ಮನನ್ನು ಅಗಲಿದ್ದಾರೆ.






