ಜನಮನ

ಅಪಘಾತದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿ ನೆರವಾದ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ಕೆ ಮೆಚ್ಚುಗೆ

Views: 0

ಬೈಕ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರ ಯುವಕರ ನೆರವಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧಾವಿಸಿ ಮಾನವೀಯತೆ ಮೆರೆದಿದ್ದಾರೆ.

ಗ್ರಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ದೊಡ್ಡರಾಯಪೇಟೆ ಕ್ರಾಸ್ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಬಿದ್ದು ನರಳಾಡುತ್ತಿದ್ದರು.

ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವರು ತಮ್ಮ ಕಾರನ್ನು ನಿಲ್ಲಿಸಿ ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದರು.

ಈ ವೇಳೆ ಸ್ಥಳೀಯರು ದೊಡ್ಡರಾಯಪೇಟೆ ಕ್ರಾಸ್ ನಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಸೂಕ್ತ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು.

ಗಾಯಾಳುಗಳಿಗೆ ನೆರವಾದ ಸಚಿವರ ಕಾರ್ಯಕ್ಕೆ ಸ್ಥಳೀಯರ ಮೆಚ್ಚುಗೆ ಪಾತ್ರವಾಯಿತು.

Related Articles

Back to top button
error: Content is protected !!