ಇತರೆ

ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..

Views: 0

ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.

ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.

ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರು ರಸ್ತೆ ಮೇಲೆ ಬಿದ್ದಿದ್ದಾರೆ.

ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!