ಇತರೆ

ಅಪಾರ್ಟ್‌ಮೆಂಟ್‌ನ ಫ್ರಿಡ್ಜ್‌ನಲ್ಲಿ ನವವಿವಾಹಿತೆಯ ರುಂಡ ಇಲ್ಲದ ದೇಹ ಪತ್ತೆ: ಪೊಲೀಸರಿಗೆ ಶರಣಾದ ಪತಿ 

Views: 109

ಕನ್ನಡ ಕರಾವಳಿ ಸುದ್ದಿ: ಇಡೀ ದೇಶವನ್ನೇ ಬೆಚ್ಚಿಬೀಳಿಸಿರುವ ನವವಿವಾಹಿತೆ ಭೀಕರ ಹತ್ಯೆ ನಡೆದಿದೆ. ಗುವಾಹಟಿಯ ಅಪಾರ್ಟ್‌ಮೆಂಟ್‌ ಒಂದರಲ್ಲಿ ಕೊಳೆತ ವಾಸನೆ ಬರುತ್ತಿದೆ ಎಂದು ಅಕ್ಕ-ಪಕದ ಮನೆಯವರು ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ನವದಂಪತಿ ರಿಯಾ ಮತ್ತು ರಾಮಾನುಜ್ ವಾಸವಿದ್ದ ಮನೆಯ ಬಾಗಿಲು ಮುರಿದು ಒಳನುಗ್ಗಿದ್ದರು. ಈ ವೇಳೆ, ಕೆಲವೇ ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ರಿಯಾ ತಾಲುಕ್ದಾರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ಕಂಡು ಬೆರಗಾದರು.

ದೇಹದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದಾಗ, ರಿಯಾಳ ಬೆರಳುಗಳನ್ನು ಕತ್ತರಿಸಿದ್ದು, ಆಕೆಯ ತಲೆಯನ್ನು ದೇಹದಿಂದ ಬೇರ್ಪಡಿಸಲಾಗಿತ್ತು. ರುಂಡ ಇಲ್ಲದ ದೇಹವನ್ನು ವಶಕ್ಕೆ ಪಡೆದ ಪೊಲೀಸರು ತೀವ್ರ ಶೋಧದ ಬಳಿಕ, ಅಪಾರ್ಟ್‌ಮೆಂಟ್‌ನ ಫ್ರಿಡ್ಜ್‌ನಲ್ಲಿದ್ದ ಪ್ಲಾಸ್ಟಿಕ್ ಚೀಲವೊಂದರಲ್ಲಿ ರಿಯಾಳ ಕತ್ತರಿಸಿದ ತಲೆ ಪತ್ತೆಹಚ್ಚಿದರು. ಪ್ರಕರಣ ದಾಖಲಿಸಿಕೊಂಡ ತಕ್ಷಣವೇ ತಲೆಮರಿಸಿಕೊಂಡಿದ್ದ ಪತಿ ರಾಮಾನುಜ್, ತಾನೇ ಖುದ್ದಾಗಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪ್ರಸ್ತುತ, ತನಿಖೆ ಚುರುಕಾಗಿ ನಡೆಯುತ್ತಿದೆ.

Related Articles

Back to top button
error: Content is protected !!