ಯುವಜನ
ಅಪಾರ್ಟ್ ಮೆಂಟಿನ 20ನೇ ಮಹಡಿಯಿಂದ ಜಿಗಿದು10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

Views: 182
ಕನ್ನಡ ಕರಾವಳಿ ಸುದ್ದಿ: ಅಪಾರ್ಟ್ ಮೆಂಟ್ ನಿಂದ ಜಿಗಿದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಅಪಾರ್ಟ್ ಮೆಂಟ್ ನ 20ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿದ್ದಾಳೆ. ಮಧ್ಯಪ್ರದೇಶ ಮೂಲದ ಕುಟುಂಬ ಕಾಡುಗೋಡಿ ಬಳಿ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿತ್ತು. ಇದೀಗ 15 ವರ್ಷದ ಬಾಲಕಿ ಏಕಾಏಕಿ ಸಾವಿಗೆ ಶರಣಾಗಿದ್ದಾಳೆ. ಬಾಲಕಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮೃತ ಬಾಲಕಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಘಟನಾ ಸ್ಥಳಕ್ಕೆ ಕಾಡುಗೋಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.