ಇತರೆ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಮಂಕಿ ಠಾಣೆಯ ಪಿಎಸ್‌ಐ ಬಂಧನ

Views: 140

ಕನ್ನಡ ಕರಾವಳಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಮಂಕಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ಅಭಿನಂದನ್ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪ್ರಾಪ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಭಟ್ಕಳ ನಗರ ಠಾಣೆಯಲ್ಲಿ ದಾಖಲಾದ ದೂರಿನ ನಂತರ ತನಿಖೆ ಆರಂಭಿಸಿದ ಪೊಲೀಸರು, ಆರೋಪದ ಗಂಭೀರತೆಯನ್ನು ಪರಿಗಣಿಸಿ ಪಿಎಸ್‌ಐ ಅಭಿನಂದನ್ ಅವರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಪೊಲೀಸರು ಸಾಕ್ಷ್ಯ ಸಂಗ್ರಹ ಮತ್ತು ವಿಚಾರಣೆ ಮುಂದುವರಿಸಿದ್ದಾರೆ.

Related Articles

Back to top button
error: Content is protected !!