ಇತರೆ
ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ!
Views: 63
ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನರೋತ್ತಮ್ ಅಲಿಯಾಸ್ ನೇತಾ (28) ಮತ್ತು ರಿಷಭ್ ಝಾ (26) ಎಂದು ಗುರುತಿಸಲಾಗಿದೆ.
ನರೋತ್ತಮ್ ಬಾಲಕಿಯ ಕುಟುಂಬಕ್ಕೆ ಮೊದಲೇ ಪರಿಚಿತನಾಗಿದ್ದು, ರಾಜ ವಿಹಾರ್‌ನಲ್ಲಿ ಕ್ಷೌರಿಕನ ಅಂಗಡಿ ನಡೆಸುತ್ತಿದ್ದ. ಮತ್ತೊಬ್ಬ ಆರೋಪಿ ರಿಷಭ್ ಖಾಸಗಿ ಬ್ಯಾಂಕ್ ಉದ್ಯೋಗಿಯಾಗಿದ್ದಾನೆ.
ಪರಿಚಯದ ದುರುಪಯೋಗ ಪಡಿಸಿಕೊಂಡ ನರೋತ್ತಮ್, ಬಾಲಕಿಯನ್ನು ತನ್ನ ಮನೆಗೆ ಕರೆತಂದಿದ್ದಾನೆ. ಅಲ್ಲಿ ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ, ಇಬ್ಬರೂ ಸೇರಿ ಅಮಾನವೀಯವಾಗಿ ಅತ್ಯಾಚಾರ ಎಸಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂತ್ರಸ್ತೆಯ ಕುಟುಂಬ ಪೊಲೀಸರಿಗೆ ದೂರು ನೀಡಿದೆ. ಬಾಲಕಿಯ ಹೇಳಿಕೆ ಮತ್ತು ವೈದ್ಯಕೀಯ ವರದಿಯ ಆಧಾರದ ಮೇಲೆ ಪೊಲೀಸರು ಬಿಎನ್‌ಎಸ್ ಸೆಕ್ಷನ್ 70 (ಸಾಮೂಹಿಕ ಅತ್ಯಾಚಾರ) ಹಾಗೂ ಪೋಕ್ಸ್ ಕಾಯಿದೆಯಡಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.






