ಯುವಜನ

ಬೆಳ್ತಂಗಡಿ:ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಗರ್ಭಿಣಿಯಾಗಿಸಿದ ಯುವಕನ ವಿರುದ್ಧ ದೂರು 

Views: 179

ಕನ್ನಡ ಕರಾವಳಿ ಸುದ್ದಿ: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಘಟನೆ ವೇಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಆರೋಪಿ ಯುವಕನ ವಿರುದ್ಧ ವೇಣೂರು ಪೊಲೀಸರಿಗೆ ನೊಂದ ಬಾಲಕಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಿರ್ಲಾಲು ಗ್ರಾಮದ ನಿವಾಸಿ ಸನತ್ (28ವ) ಎಂಬಾತನೇ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ.

ಆರೋಪಿ ಸನತ್ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು ಬಾಲಕಿಯ ತಂದೆಯೊಂದಿಗೆ ಅಗಾಗ ಮನೆಗೆ ಬರುತ್ತಿದ್ದ. ಈ ವೇಳೆ ಅಪ್ರಾಪ್ತ ವಯಸ್ಸಿನ ಬಾಲಕಿ ಜೊತೆ ಸಲುಗೆಯಿಂದ ಇದ್ದನೆನ್ನಲಾಗಿದೆ. ಬಾಲಕಿಯ ಜನ್ಮ ದಿನದ ಕಾರ್ಯಕ್ರಮಕ್ಕೆ ಬಂದು ಆರೋಪಿ ರಾತ್ರಿ ಮನೆಯಲ್ಲಿ ಉಳಿದುಕೊಂಡಿದ್ದು, ರಾತ್ರಿ ವೇಳೆ ಬಾಲಕಿ ಮಲಗಿದ್ದ ಕೋಣೆಗೆ ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದನೆಂದು ದೂರಿನಲ್ಲಿ ಆರೋಪಿಸಲಾಗಿದೆ.

ನಂತರದ ದಿನಗಳಲ್ಲಿ ಕೂಡಾ ಆಗಾಗ ರಾತ್ರಿ ವೇಳೆಯಲ್ಲಿ ಬಂದು ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಇದೀಗ ಆರೋಪಿ ಸನತ್ ವಿರುದ್ಧ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ.

 

 

Related Articles

Back to top button
error: Content is protected !!