ಅಮರ್ನಾಥ ಯಾತ್ರೆ ವೇಳೆ ಭೂಕುಸಿತ ; 83 ಮಂದಿ ಕನ್ನಡಿಗರು ಅತಂತ್ರ: ರಕ್ಷಣೆಗೆ ರಾಜ್ಯ ಸರ್ಕಾರದಿಂದ ತಂಡ

Views: 1
ಅಮರನಾಥ ಯಾತ್ರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಗುಡ್ಡ ಕುಸಿತದಿಂದಾಗಿ ಕರ್ನಾಟಕದ 83 ಮಂದಿ ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಯಾತ್ರಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ ಸ್ಥಳದಿಂದಲೇ ಮೋದಿ ಅವರಿಗೆ ತಮ್ಮನ್ನು ರಕ್ಷಣೆ ಮಾಡುವಂತೆ ವಿಡಿಯೋ ಮಾಡಿ ಮನವಿ ಮಾಡಿಕೊಂಡಿದ್ದಾರೆ.
ಪ್ರಾಥಮಿಕ ವರದಿಯ ಪ್ರಕಾರ ಒಂದು ಸಾವಿರಕ್ಕೂ ಹೆಚ್ಚು ಜನರು ಸಿಲುಕಿಕೊಂಡಿದ್ದು ,ಈ ಪೈಕಿ 83 ಮಂದಿ ಕರ್ನಾಟಕದವರು ಎಂದು ತಿಳಿಯಲಾಗಿದೆ. ಇವರೆಲ್ಲರೂ ಸುರಕ್ಷಿತವಾಗಿದ್ದು, ಶೀಘ್ರದಲ್ಲಿಯೇ ಅವರೆಲ್ಲರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಲಾಗಿದೆ.
ಭಾರಿ ಮಳೆಯಿಂದಾಗಿ ಹವಾಮಾನ ಸಹಜ ಸ್ಥಿತಿಗೆ ಮರಳಿದ ಬಳಿಕ ಸೇನಾ ಹೆಲಿಕಾಪ್ಟರ್ ಗಳ ವ್ಯವಸ್ಥೆ ಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಮಳೆಯ ಅವಾಂತರ ಮುಂದುವರಿದಿದ್ದು ಕರ್ತವ್ಯ ನಿರ್ವಹಿಸುವ ವೇಳೆ ಘೋಶನಾ ನದಿಯಲ್ಲಿ ಇಬ್ಬರು ಭಾರತೀಯ ಸೈನಿಕರು ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ.
ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.