ಜನಮನ
ಅಯ್ಯಪ್ಪ ಭಕ್ತಾದಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತ; ಓರ್ವ ಸಾವು, ಮೂವರ ಸ್ಥಿತಿ ಗಂಭೀರ

Views: 2
ಶಬರಿಮಲೆ ಅಯ್ಯಪ್ಪ ಭಕ್ತಾದಿಗಳು ಪ್ರಯಾಣಿಸುತ್ತಿದ್ದ ಕಾರು ಭೀಕರವಾಗಿ ಅಪಘಾತಕ್ಕೀಡಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಅಪಘಾತದ ಪರಿಣಾಮ ಚಂದ್ರ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ದುರ್ದೈವಿ ಚಂದ್ರ ಎಂಬುವವರು ಕುಶಾಲನಗರದ ಹಾರಂಗಿ ನಿವಾಸಿ. ಅಪಘಾತಕ್ಕೀಡಾಗಿರುವ ಕಾರಿನಲ್ಲಿ ಒಟ್ಟು ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಆಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕುಶಾಲನಗರದ ಲಿಂಗಂ, ಹರೀಶ್, ಸಂತೋಷ್ರನ್ನು ಪೆರಂಬೂರಿನ ರಾಜಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.






