ಇತರೆ

ಅರಣ್ಯ ಸಿಬ್ಬಂದಿ ಗುಂಡಿಗೆ ಬೇಟೆಗಾರ ಬಲಿ

Views: 0

ಚಾಮರಾಜನಗರ, ಬಂಡೀಪುರದ ಅರಣ್ಯ ಪ್ರದೇಶದಲ್ಲಿ ಗುಂಡಿನ ಮೊರೆತ ಕೇಳಿ ಬಂದಿದೆ. ಅರಣ್ಯ ಸಿಬ್ಬಂದಿ ಹಾಗೂ ಕಳ್ಳ ಬೇಟೆಗಾರರ ಮಧ್ಯೆ ಗುಂಡಿನ ಚಕಮಕಿ ನಡೆದು ಬೇಟೆಗಾರನೊಬ್ಬ ಬಲಿಯಾಗಿದ್ದಾನೆ.

ಅರಣ್ಯ ಇಲಾಖೆ ಸಿಬ್ಬಂದಿ ಹಾರಿಸಿದ ಗುಂಡು ತಗುಲಿ ಬಲಿಯಾದ ಬೇಟೆಗಾರನನ್ನು ಮನು (27) ಎಂದು ಗುರುತಿಸಲಾಗಿದೆ.

ಜಿಲ್ಲೆ ಬಂಡೀಪುರದ ಮದ್ದೂರು ದಟ್ಟಾರಣ್ಯದಲ್ಲಿ 10 ಕಳ್ಳ ಬೇಟೆಗಾರರು ಕಡವೆ ಬೇಟೆಯಾಡಲು ಬಂದಿರುವ ನಿಖರ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಕಾರ್ಯಾಚರಣೆ ವೇಳೆ ಪತ್ತೆಯಾದ ಬೇಟೆಗಾರರನ್ನು ಬಂಧಿಸಲು ಹೋದ ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆಯೇ ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ.

ಸ್ವಯಂ ರಕ್ಷಣಗೆ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಲಾಯಿತಾದರೂ ಮತ್ತೆ ಗುಂಡು ಹಾರಿಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ಪ್ರತಿದಾಳಿ ನಡೆಸಿದ್ದಾರೆ.

ಇದೇ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಬೇಟೆಗಾರ ಮನು ಹತನಾಗಿದ್ದಾನೆ. ಈತನು ಗುಂಡ್ಲುಪೇಟೆ ತಾಲೂಕಿನ ಭೀಮನಮಡು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿದ್ದಾರೆ. ಉಳಿದ ಬೇಟೆಗಾರರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. 9 ಮಂದಿ ಬಂಧನಕ್ಕಾಗಿ ಬಲೆ ಬೀಸಲಾಗಿದೆ.

Related Articles

Back to top button
error: Content is protected !!