ಇತರೆ

ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಶವ ಪತ್ತೆ

Views: 58

ಕನ್ನಡ ಕರಾವಳಿ ಸುದ್ದಿ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ ಸಿಲುಕಿ ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರರೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸೋಮವಾರ ಕೋಟೆಪುರ ಅಲಿವೆಬಾಗಿಲು ಬಳಿ ಪತ್ತೆಯಾಗಿದೆ.

ಮೃತರನ್ನು ನಾರಾಯಣ(31) ಎಂದು ಗುರುತಿಸಲಾಗಿದೆ.

ಮಂಗಳೂರು ದಕ್ಕೆಯಿಂದ ‘ಓಷನ್ ಸ್ಟಾರ್’ ಹೆಸರಿನ ಬೋಟ್ ನಲ್ಲಿ ಆ. 9ರಂದು ಮೀನುಗಾರಿಕೆಗೆ ತೆರಳುವಾಗ ಭಾರಿ ಅಲೆ ಅಪ್ಪಳಿಸಿದ ಪರಿಣಾಮ ನಾರಾಯಣ ಅವರು ಸಮುದ್ರಕ್ಕೆ ಕೊಚ್ಚಿಹೋಗಿದ್ದರು. ಘಟನೆಯ ಬಳಿಕ ದೋಣಿ ಮಾಲೀಕರು ಹಾಗೂ ಕುಟುಂಬಸ್ಥರು ಕಳೆದ ಎಂಟು ದಿನಗಳಿಂದ ನಾರಾಯಣ ಅವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದರು.

ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೂ ದಾಖಲಾಗಿತ್ತು. ಮೃತದೇಹದ ಮಹಜರು ಸೇರಿದಂತೆ ಕಾನೂನು ಪ್ರಕ್ರಿಯೆಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಯಿತು. ಘಟನೆಗೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!