ಇತರೆ

ಅಲ್ಪಾಡಿಯಲ್ಲಿ ರಿಕ್ಷಾಕ್ಕೆ ಟೆಂಪೋ ಢಿಕ್ಕಿ: ಮಹಿಳೆ ಗಂಭೀರ

Views: 29

ಕನ್ನಡ ಕರಾವಳಿ ಸುದ್ದಿ: ಅಲ್ಪಾಡಿ ಗ್ರಾಮದ ಕೊಳಲಾಡಿ ಬಳಿ ಆಟೋ ರಿಕ್ಷಾಕ್ಕೆ ಗೂಡ್ಸ್ ಟೆಂಪೋ ಢಿಕ್ಕಿ ಹೊಡೆದು ಮಹಿಳೆ ಗಂಭೀರ ಗಾಯಗೊಂಡಿದ್ದಾರೆ.

ಸುಧಾಕರ ಶೆಟ್ಟಿ ಮತ್ತು ಲಕ್ಷ್ಮೀ ಅವರನ್ನು ಆಟೋ ರಿಕ್ಷಾದಲ್ಲಿ ಕರೆದುಕೊಂಡು ಆರ್ಡಿ ಕಡೆಗೆ ಪ್ರಯಾಣಿಸುತ್ತಿರುವಾಗ ವೇಗವಾಗಿ ಬಂದ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಲಕ್ಷ್ಮೀ ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.ಸುಧಾಕರ ಶೆಟ್ಟಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!