ಶಿಕ್ಷಣ

ಅಸೋಡು ಶಾಲೆ: ಶಿಕ್ಷಕಿ ಗಾಯತ್ರಿ ಅವರಿಗೆ ಬೀಳ್ಕೊಡುಗೆ ಸಮಾರಂಭ

Views: 7

ಕುಂದಾಪುರ:ಸುಮಾರು 8 ವರ್ಷಗಳ ಕಾಲ ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ, ಇದೀಗ ಬ್ರಹ್ಮಾವರ ವಲಯದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿ ಸಾಲಿಗ್ರಾಮ ಇಲ್ಲಿಗೆ ವರ್ಗಾವಣೆಗೊಂಡ ಅವರಿಗೆ ಅಸೋಡು ಶಾಲೆಯಲ್ಲಿ ಊರವರ ಅಭಿಮಾನ ಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಯಿತು.

ಅಸೋಡು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅರುಣ ರಾಧಾಕೃಷ್ಣ ಅವರು ಅಧ್ಯಕ್ಷತೆ ವಹಿಸಿದ್ದರು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ನಾಗಪ್ಪಯ್ಯ ಶೇರಿಗಾರ, ಉಪಾಧ್ಯಕ್ಷರಾದ ಶ್ರೀಮತಿ ಶಶಿಕಲಾ, ಅಂಗನವಾಡಿ ಕಾರ್ಯಕರ್ತೆ ನಿಶ್ಮಿತಾ, ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಶಂಕರ್ ಶೆಟ್ಟಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಯೋಜಕರಾದ ಶ್ರೀ ಶೇಖರ್ ದೇವಾಡಿಗ, ಮಂಜುನಾಥ ಶೇರಿಗಾರ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳು, ಶಾಲೆಯ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ 8 ವರ್ಷಗಳ ಕಾಲ ಈ ಶಾಲೆಯಲ್ಲಿ ಆದರ್ಶ ಶಿಕ್ಷಕಿಯಾಗಿ, ಶಾಲೆ ಮತ್ತು ವಿದ್ಯಾರ್ಥಿಗಳ ನಿಸ್ವಾರ್ಥ ಸೇವೆ ಸಲ್ಲಿಸಿ,ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ ಶಿಕ್ಷಕಿಯ ಬಗ್ಗೆ ಕೊಂಡಾಡಿ ಅವರನ್ನು ಬೀಳ್ಕೊಡಲಾಯಿತು.

ಶಾಲಾ ಮುಖ್ಯ ಶಿಕ್ಷಕ ಶಂಕರ್ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸ್ವಾತಿ ಅವರು ವಂದಿಸಿದರು.

Related Articles

Back to top button