ಶಿಕ್ಷಣ

ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ- ಅಮೃತ ಮಹೋತ್ಸವ ಕಾರ್ಯಕ್ರಮ

Views: 91

ಕನ್ನಡ ಕರಾವಳಿ ಸುದ್ದಿ, ಕುಂದಾಪುರ: ಅಸೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.4ರಂದು ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.

ಉಡುಪಿ- ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ರೇಖಾ ಚಿತ್ರ ಅನಾವರಣ,ಸಿಂಗಾರ ಸಿರಿ ಅರಳಿಸಿ, ವಿದ್ಯಾನಿಧಿ ಉದ್ಘಾಟಿಸಿದರು.

ಅವರು ಮಾತನಾಡಿ, ಜಾತಿ ಧರ್ಮಕ್ಕಿಂತ ಮಿಗಿಲಾದುದೇ ಶಿಕ್ಷಣ, ದಿನದಿಂದ ದಿನಕ್ಕೆ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಆತಂಕ ಹೆಚ್ಚಾಗಿದೆ. ಕೇವಲ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಓದಿದರೆ ಮಾತ್ರ ಎಂಬ ತಪ್ಪು ಕಲ್ಪನೆ ಬಿಟ್ಟು ಉತ್ತಮ ಅಂಕಗಳಿಸಿದರೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಉದ್ಯೋಗದ ಅವಕಾಶ ಸಾಕಷ್ಟಿದೆ ಎಂದರು. ಕುಂದಾಪುರದಲ್ಲಿ ಬಹುದಿನದ ಕನಸಾದ ಮೆಡಿಕಲ್ ಕಾಲೇಜು ಸ್ಥಾಪನೆಗೆ ಡಾ.ಆನಂತರಾಮ ಶೆಟ್ಟಿಯವರ ಪ್ರಯತ್ನಕ್ಕೆ ನಾವೆಲ್ಲರೂ ಪ್ರಾಮಾಣಿಕ ಸಹಕಾರ ನೀಡುತ್ತೇವೆ ಎಂದರು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ.ಸಿ.ಕುಂದರ್ ಮಾತನಾಡಿ, ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಶಿಕ್ಷಣ ಪಡೆದು ಸಮಾಜದ ಮುಖ್ಯ ವಾಹಿನಿಗೆ ಬರಬೇಕಾದರೆ ಹಳೆ ವಿದ್ಯಾರ್ಥಿಗಳ ಪಾತ್ರ ಬಹಳಷ್ಟಿದೆ ಎಂದರು.

ಚೇರ್ಮ್ಯಾನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್ ಮೈಸೂರು ಮರ್ಚಂಟೈಲ್ ಕೋ.ಅ.ಡಾ. ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬಹುಮಾನ ವಿತರಣೆ ಮಾಡಿದರು.

ಪ್ರೋಗ್ರಾಂ ಮೆನೇಜರ್ ನವೀನ್ ಎಂ ಎಲ್, ಅಸೋಡು ಯು ಹೆಲ್ತ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಡಾ.ಅನಂತರಾಮ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಬಾಲಚಂದ್ರಶೆಟ್ಟಿ ಕಾವ್ರಾಡಿ, ಕಾಳಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪಾರ್ವತಿ ಶೇರಿಗಾರ್, ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರ ಪೂಜಾರಿ ಅಸೋಡು, ರಘುರಾಮ ಶೆಟ್ಟಿ, ಕೋಟೇಶ್ವರ ವೃತ್ತ ಶಿಕ್ಷಣ ಸಂಯೋಜಕ ರಾಜು ಖಾರ್ವಿ, ಶಾಲಾ ಎಸ್ ಡಿಎಂಸಿ ಅಧ್ಯಕ್ಷೆ ಜ್ಯೋತಿ ಗಣೇಶ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಜನ್ ಕುಮಾರ್ ಶೆಟ್ಟಿ, ಪ್ರತ್ವೀಶ್, ವಿದ್ಯಾರ್ಥಿ ನಾಯಕ ಪ್ರಜ್ವಲ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷ ನಾಗಪ್ಪಯ್ಯ ಸೇರಿಗಾರ್, ಕೃಷ್ಣ ಪೂಜಾರಿ, ಶಾಲಾ ಮುಖ್ಯ ಶಿಕ್ಷಕ ಶಂಕರ್ ಶೆಟ್ಟಿ ಇನ್ನಿತರರನ್ನು ಸನ್ಮಾನಿಸಲಾಯಿತು.

ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ದಯಾನಂದ ಹೆಗ್ಡೆ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕ ಶಂಕರ ಶೆಟ್ಟಿ ಶಾಲಾ ವರದಿ ವಾಚಿಸಿದರು. ತುಳಸಿ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಎಂ ಕೆ ಶೆಟ್ಟಿ ನಡೂರು ಸಂತೋಷ್ ಕುಮಾರ್ ಅಸೋಡು ಕಾರ್ಯಕ್ರಮ ನಿರೂಪಿಸಿದರು. ಉಮೇಶ್ ಪೂಜಾರಿ ವಂದಿಸಿದರು.

Related Articles

Back to top button
error: Content is protected !!