ಶಿಕ್ಷಣ
ಅಸೋಡು ಸ.ಹಿ.ಪ್ರಾ.ಶಾಲೆಯಲ್ಲಿ “ಯಕ್ಷಗಾನ ತರಬೇತಿ ಶಿಬಿರ” ಉದ್ಘಾಟನೆ

Views: 102
ಕುಂದಾಪುರ: ಅಸೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಲಾಯಿತು.
ಕಾಳಾವರ ಗ್ರಾಮ ಪಂಚಾಯತ್ ಸದಸ್ಯ ಚಂದ್ರ ಪೂಜಾರಿ ಅಸೋಡು ಯಕ್ಷಗಾನ ತರಬೇತಿ ಶಿಬಿರವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಯಕ್ಷಗಾನ ತರಬೇತುದಾರರಾದ ಗಣೇಶ ಹೆಗಡೆ ಶಿರಸಿ- ಸಿದ್ದಾಪುರ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅರುಣಾ ರಾಧಾಕೃಷ್ಣ, ರಾಧಾಕೃಷ್ಣ ಸೆರೆಗಾರ್ ಸಭೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಶಂಕರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕಿ ತುಳಸಿ ವಂದಿಸಿದರು. ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.