ಧಾರ್ಮಿಕ
ಅ. 21 ನಾಗರ ಪಂಚಮಿಗೆ ಉಡುಪಿ,ದ.ಕ. ಜಿಲ್ಲೆಗೆ ರಜೆ ನೀಡಲು ಶಾಸಕ ಸುನಿಲ್ ಕುಮಾರ್ ಮನವಿ

Views: 1
ಅಗಸ್ಟ್ 21 ರಂದು ನಾಗರ ಪಂಚಮಿ ಪ್ರಯುಕ್ತ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಎರಡು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕಾರ್ಕಳದ ಶಾಸಕ ವಿ.ಸುನೀಲ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
ಕರಾವಳಿ ಭಾಗದಲ್ಲಿ ಭಕ್ತಿ ಶ್ರದ್ಧೆಯಿಂದ ಜನರು ನಾಗರಾಧನೆಯಲ್ಲಿ ಪಾಲ್ಗೊಳ್ಳುತ್ತಾರೆ. ಶಾಲಾ ಕಾಲೇಜು ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಿಗೂ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.







