ಆಂಬ್ಯುಲೆನ್ಸ್ ಸಿಗದೆ ಬೈಕ್ನಲ್ಲೇ ತಂದೆ ಶವ ಸಾಗಿಸಿದ ಮಕ್ಕಳು!

Views: 91
ತುಮಕೂರು: ಮೃತದೇಹವನ್ನು ಸಾಗಿಸಲು ಆಂಬ್ಯುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ಅಪ್ಪನ ಶವವನ್ನ ಮಕ್ಕಳಿಬ್ಬರು ಬೈಕ್ ನಲ್ಲಿ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಸಮುದಾಯ ಆರೋಗ್ಯ ಕೇಂದ್ರದ ಬಳಿ ಬುಧವಾರ ನಡೆದಿದೆ.
ವಯೋಸಹಜ ಕಾಯಿಲೆಯಿಂದ ದಳವಾಯಿ ಹಳ್ಳಿ ಗ್ರಾಮದ ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮಕ್ಕಳ ಹೊನ್ನೊರಪ್ಪ ಅವರನ್ನು 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಮಾರ್ಗಮದ್ಯದಲ್ಲೇ ಹೊನ್ನೂರಪ್ಪನ ಜೀವ ಹೋಗಿದೆ.
ಮೃತ ಶರೀರವನ್ನು ಸಾಗಿಸಲು 108 ಆಂಬ್ಯುಲೆನ್ಸ್ ಸಿಬ್ಬಂದಿ ನಿರಾಕಿಸಿದ್ದಾರೆ. ಆಂಬ್ಯುಲೆನ್ಸ್ ನಲ್ಲಿ ಶವ ಸಾಗಿಸಲು ಅವಕಾಶವಿಲ್ಲ ಎಂದು ಹೇಳಿದ್ದಾರೆ. ಕೈಯಲ್ಲಿ ಹಣವಿಲ್ಲದ ಹೊನ್ನೂರಪ್ಪ ಮಕ್ಕಳು ವಿಧಿಯಿಲ್ಲದೆ ತಂದೆ ಶವವನ್ನು ಬೈಕ್ ನಲ್ಲೇ ತೆಗೆದುಕೊಂಡು ಹೋಗಿದ್ದಾರೆ.
ಹೃದಯವಿದ್ರಾವಕ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿರುವುದು ಒಂದು ರೀತಿ ಆಡಳಿತದ ನಿರ್ಲಕ್ಷಕ್ಕೆ ಹಿಡಿದ ಕೈಗಡಿಯಾಗಿದೆ. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಸಚಿವರುಗಳು ಇಂತಹ ಸಮಸ್ಯೆಗಳಿಗೆ ಪರಿಹಾರವನ್ನು ನೀಡಬೇಕಾಗಿದೆ.






