ಇತರೆ
ಆಗುಂಬೆಯಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವವಾಗಿ ಪತ್ತೆ!

Views: 1145
ಶಿವಮೊಗ್ಗ: ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ ಎಕೆ (24) ಪೂಜಾ ಶವವಾಗಿ ಪತ್ತೆಯಾಗಿದ್ದಾಳೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಶವ ಪತ್ತೆಯಾಗಿದ್ದು, ಭೀಕರವಾಗಿ ಕೊಲೆಗೈದು ಅರಣ್ಯ ಪ್ರದೇಶದಲ್ಲಿ ಶವವನ್ನು ಬೀಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಎಸ್ಕೆಡಿಆರ್ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ)ಯಾಗಿ ಪೂಜಾ ಕೆಲಸ ಮಾಡುತ್ತಿದ್ದಳು. ಕಳೆದ ಜೂನ್ 29 ರಂದು ನಾಪತ್ತೆಯಾಗಿದ್ದಳು. ಪ್ರಕರಣ ಸಂಬಂಧ ಆಗುಂಬೆ ಪೊಲೀಸರು ಮಣಿಕಂಠ ಎಂಬಾತನ ವಶಕ್ಕೆ ಪಡೆದುಕೊಂಡಿದ್ದಾರೆ. ಕೊಲೆ ಯಾವ ವಿಚಾರಕ್ಕೆ ನಡೆದಿದೆ ಎನ್ನುವುದರ ಬಗ್ಗೆ ಪೊಲೀಸ್ ತನಿಖೆಯಿಂದ ಇನ್ನಷ್ಟೇ ತಿಳಿಯಬೇಕಾಗಿದೆ.






