ಇತರೆ
ಆಗುಂಬೆ ಘಾಟ್ ನಲ್ಲಿ ಬೈಕ್- ಬಸ್ ಅಪಘಾತ ಬಾರ್ಕೂರಿನ ಯುವತಿ ಸಾವು

Views: 11
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ನಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವತಿ ನಮಿತಾ (19 )ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಭಾನುವಾರ ನಡೆದ ಅಪಘಾತದಲ್ಲಿ ಶಶಾಂಕ( 21) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಭಾನುವಾರ ಬಾರ್ಕೂರಿನ ಆರು ಮಂದಿ ಕುಟುಂಬಿಕರು ಆಗುಂಬೆ ಸೂರ್ಯಾಸ್ತದ ಸ್ಥಳಕ್ಕೆ ಹೋಗಿದ್ದರು. ಎದುರಿನಿಂದ ಬರುತ್ತಿದ್ದ ಬಸ್ ಗೆ ಬೈಕ್ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದ್ದರು.






