ಜನಮನ

ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ

Views: 86

ವಿಜಯಪುರ,  ಎರಡು ವರ್ಷದ ಮಗು ತೆರೆದ ಕೊಳವೆ ಬಾವಿಗೆ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಾತ್ವಿಕ್ ಮುಜಗೊಂಡ ಆಟವಾಡಲು ಹೋಗಿದ್ದ ವೇಳೆ ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಇಂದು (ಏಪ್ರಿಲ್ 03) ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದಾನೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ, ತಾಲೂಕು ಆಡಳಿತಾಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ.

ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದ್ರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದ. ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ. ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದ್ದು, ಇದೀಗ ಆ್ಯಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ.

ಇನ್ನು ವಿಷಯ ತಿಳಿದಯುತ್ತಿದ್ದಂತೆಯೇ ಸ್ಥಳದಲ್ಲಿ ಜನರ ಸಂಖ್ಯೆ ಕ್ಷಣದಿಂದ ಕ್ಷಣಕ್ಕೆ ಹೆಚ್ಚಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇತ್ತ ಸಾತ್ವಿಕ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Related Articles

Back to top button
error: Content is protected !!