ಇತರೆ

ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ, ಕಿರುಕುಳ ನೀಡಿದ ಪತಿಯ ಮೇಲೆ ಶಂಕೆ?

Views: 141

ಬೆಂಗಳೂರು: ರಾಜಧಾನಿಯ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು ಎಂದು ದಾಖಲಾಗಿದ್ದರೂ ಮೃತಳ ತವರಿನವರು ಸಾವಿನ ಬಗ್ಗೆ ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನಿನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗು ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!