ಧಾರ್ಮಿಕ
ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ವಿ. ಆರ್.ಎಲ್. ಸಮೂಹ ಸಂಸ್ಥೆಯ ಮುಖ್ಯಸ್ಥ ವಿಜಯ ಸಂಕೇಶ್ವರ ಭೇಟಿ

Views: 111
ಕನ್ನಡ ಕರಾವಳಿ ಸುದ್ದಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ನ.16 ರಂದು ವಿ.ಆರ್.ಎಲ್. ಸಮೂಹ ಸಂಸ್ಥೆಯ ಮುಖ್ಯಸ್ಥರಾದ ವಿಜಯ ಸಂಕೇಶ್ವರ ಇವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಆಡಳಿತ ಧರ್ಮದರ್ಶಿ ಕೆ ಶ್ರೀ ರಮಣ ಉಪಾಧ್ಯಾಯ ಹಾಗೂ ಧರ್ಮದರ್ಶಿ ಶ್ರೀ ಕೆ.ನಿರಂಜನ ಉಪಾಧ್ಯಾಯ ಇವರು ಅವರನ್ನು ಸ್ವಾಗತಿಸಿ, ದೇವಸ್ಥಾನದ ಪರವಾಗಿ ಗೌರವಿಸಿದರು. ಪರ್ಯಾಯ ಅರ್ಚಕರಾದ ಕೆ ಕೃಷ್ಣಾನಂದ ಉಪಾಧ್ಯಾಯ ಹಾಗೂ ಸಹೋದರರು ಶ್ರೀದೇವರ ಪ್ರಸಾದವನ್ನು ನೀಡಿ ಆಶೀರ್ವದಿಸಿದರು.
ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.








