ರಾಜಕೀಯ
ಆಯನೂರು ಮಂಜುನಾಥ ಕಾಂಗ್ರೆಸ್ ಸೇರ್ಪಡೆ

Views: 0
ಬೆಂಗಳೂರು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಯನೂರು ಮಂಜುನಾಥ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ ಮಧು ಬಂಗಾರಪ್ಪ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಇನ್ನಿತರರು ಇದ್ದರು.
ವಿಧಾನಸಭಾ ಚುನಾವಣೆ ಮುನ್ನ ಬಿಜೆಪಿಯಿಂದ ಜೆಡಿಎಸ್ ಗೆ ಜಿಗಿದು ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದು ಮಂಜುನಾಥ್ ಅಲ್ಲಿ ಸೋಲನ್ನು ಅನುಭವಿಸಿದ್ದರು.
ಬಳಿಕ ಅವರು ರಾಜಕೀಯ ಮರು ಹುಟ್ಟು ಪಡೆಯಲು ಕಾಂಗ್ರೆಸ್ ಸೇರಲು ಬಯಸಿದ್ದು, ಸ್ಥಳೀಯ ಕಾಂಗ್ರೆಸ್ ನಾಯಕರ ವಿರೋಧ ನಡುವೆಯೂ ಕಾಂಗ್ರೆಸ್ಸಿಗೆ ಸೇರ್ಪಡೆಯಾದರು






