ಆರ್ಥಿಕ

ಆಯುಷ್ಮಾನ್‌ ಭಾರತ್ 5 ಲಕ್ಷ ರೂ.ವಿಮೆ ಮೊತ್ತ 10 ಲಕ್ಷ ರೂ.ಏರಿಕೆ ? 70 ವರ್ಷ ಮೇಲ್ಪಟ್ಟವರಿಗೂ ವಿಮಾ ಸೌಲಭ್ಯ, ಬಜೆಟ್ ನಲ್ಲಿ ನಿರೀಕ್ಷೆ?

Views: 89

ನವದೆಹಲಿ:ನರೇಂದ್ರ ಮೋದಿ 3.0 ಸರಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆಗೆ ಸಿದ್ಧತೆ ನಡೆದಿದ್ದು ಆಯುಷ್ಮಾನ್ ಭಾರತ್ ವಿಮೆ ಮೊತ್ತವನ್ನು ಹೆಚ್ಚಳ ಅಂದರೆ 10 ಲಕ್ಷ ರೂ ವರೆಗೆ ಹೆಚ್ಚಳದ ಘೋಷಣೆಯನ್ನು ನಿರೀಕ್ಷಿಸಲಾಗಿದೆ.

ಜೊತೆಗೆ 70 ವರ್ಷ ಮೇಲ್ಪಟ್ಟ ಎಲ್ಲರನ್ನೂ ವಿಮಾ ವ್ಯಾಪ್ತಿಗೆ ಸೇರಿಸುವ ಸಾಧ್ಯತೆಗಳು ಇವೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್‌ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಸದ್ಯ ಇರುವ 5 ಲಕ್ಷ ರೂ. ವಿಮೆ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಳ ಮಾಡಲು ಹಾಗೂ 70 ವರ್ಷ ಮೇಲ್ಪಟ್ಟವರನ್ನೂ ವಿಮಾ ಸೌಲಭ್ಯದ ವ್ಯಾಪ್ತಿಗೆ ತರಲು ಕೇಂದ್ರ ಸರ್ಕಾರ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಜತೆಗೆ ಮುಂದಿನ ಮೂರು ವರ್ಷಗಳಲ್ಲಿ ಈ ವಿಮೆಯ ಫಲಾನುಭವಿಗಳ ಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನೂ ಹಾಕಿಕೊಂಡಿದೆ ಎಂದು ಹೇಳಲಾಗಿದೆ. ಜು.23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸುವ ಬಜೆಟ್‌ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಹೊರಬೀಳಲಿದೆ ಎನ್ನಲಾಗಿದೆ.

ಸದ್ಯ 16ರಿಂದ 59 ವರ್ಷದೊಳಗಿನವರು ಆಯುಷ್ಮಾನ್‌ ಭಾರತ ಯೋಜನೆಯಡಿ ವಾರ್ಷಿಕ 5 ಲಕ್ಷ ರೂ. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. 2018ರಲ್ಲಿ ಈ ದರವನ್ನು ನಿಗದಿ ಮಾಡಲಾಗಿದೆ. ಹೆಚ್ಚಿದ ಹಣದುಬ್ಬರ ಹಾಗೂ ಕಸಿ, ಕ್ಯಾನ್ಸರ್‌ನಂತಹ ದುಬಾರಿ ಚಿಕಿತ್ಸೆಗಳಿಗೂ ಅನುಕೂಲವಾಗಲಿ ಎಂದು ಇದೀಗ ವಿಮೆ ದರ ಹೆಚ್ಚಳ ಮಾಡುವ ಚಿಂತನೆ ಇದೆ. ಜತೆಗೆ ಇದೀಗ ಸರ್ಕಾರ 70 ವರ್ಷ ಮೇಲ್ಪಟ್ಟವರನ್ನೂ ವಿಮಾ ಸೌಲಭ್ಯದ ವ್ಯಾಪ್ತಿಗೆ ತರಲು ಉದ್ದೇಶಿಸಿದೆ.

 

Related Articles

Back to top button
error: Content is protected !!