ಸಾಂಸ್ಕೃತಿಕ

ಆಳ್ವಾಸ್‌ ಹಾಸ್ಟೆಲ್‌ನಲ್ಲಿ ಗದಗದ ದ್ವಿತೀಯ ಪಿಯು ವಿದ್ಯಾರ್ಥಿ ಅನುಮಾನಾಸ್ಪದ ಸಾವು

Views: 81

ಮಂಗಳೂರು: ಹಾಸ್ಟೆಲ್​ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆಯಲ್ಲಿ ನಡೆದಿದೆ. ವಿದ್ಯಾರ್ಥಿ ಮನೋಜ್ (18) ಮೃತ ವಿದ್ಯಾರ್ಥಿ.

ಮೃತ ವಿದ್ಯಾರ್ಥಿಯು ದ್ವಿತೀಯ ಪಿಯು ಓದುತ್ತಿದ್ದ. ಮೂಲತಃ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳದ ಮಲ್ಲಪ್ಪ ಎಂಬುವವರ ಪುತ್ರನಾಗಿದ್ದಾನೆ. ಆಳ್ವಾಸ್ ಸಂಸ್ಥೆ ಹಾಸ್ಟೆಲ್​​ನ ಬಾತ್ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಅನುಮಾನ ವ್ಯಕ್ತವಾಗಿದೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವಿಚಾರ ಮೃತ ಮನೋಜ್ ಪೋಷಕರಿಗೆ ತಿಳಿಸುತ್ತಿದ್ದಂತೆ ಹಾಸ್ಟೆಲ್​ನತ್ತ ದೌಡಾಯಿಸಿದ್ದಾರೆ. ತಾವು ಬರುವವರೆಗೂ ಶವ ಹೊರ ತಗೆಯದಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ಮನೋಜ್​​ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೂ ಮುನ್ನ ಏನಾಗಿತ್ತೆಂದು ತಿಳಿಯಲು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಲಾಗುತ್ತಿದೆ.

Related Articles

Back to top button
error: Content is protected !!