ಇತರೆ

ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳು ಸೇರಿ ಮದುವೆ ಫಿಕ್ಸ್ ಆಗಿದ್ದ ತಮ್ಮನ ಭೀಕರ ಹತ್ಯೆ 

Views: 109

ಕನ್ನಡ ಕರಾವಳಿ ಸುದ್ದಿ: ಆಸ್ತಿಗಾಗಿ ಅಣ್ಣ, ಅಣ್ಣನ ಮಕ್ಕಳು ಸೇರಿ ತಮ್ಮನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಯೋಗೇಶ್ (35) ಎಂದು ಗುರುತಿಸಲಾಗಿದೆ. ಯೋಗೇಶನ ಅಣ್ಣ ಲಿಂಗರಾಜ, ಅಣ್ಣನ ಮಕ್ಕಳಾದ ಭರತ್, ದರ್ಶನ್ ಸೇರಿಕೊಂಡು ಹತ್ಯೆ ಮಾಡಿದ್ದಾರೆ.

ಮೃತ ಯೋಗೇಶ್ ಮದುವೆ ಫಿಕ್ಸ್ ಆಗಿತ್ತು. ಬೆಳಿಗ್ಗೆ ಮನೆಯ ಕೊಟ್ಟಿಗೆಯಲ್ಲೇ ಹರಿತವಾದ ಆಯುಧಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಆಸ್ತಿಗಾಗಿ ಸಹೋದರರ ನಡುವೆ ಆಗಿಂದಾಗ್ಗೆ ಜಗಳ ನಡೆಯುತ್ತಿತ್ತು. ಇಂದು ಜಗಳ ವಿಕೋಪಕ್ಕೆ ತಿರುಗಿ ಹತ್ಯೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದುಬಂದಿದೆ. ಕೊಲೆ ಬಳಿಕ ಮೂವರು ಆರೋಪಿಗಳು ಪರಾರಿ ಆಗಿದ್ದಾರೆ. ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!