ಇತರೆ

ಆಸ್ತಿಗಾಗಿ ಪತ್ನಿ ಮಲಗಿದ್ದ ವೇಳೆ ಮುಖಕ್ಕೆ ದಿಂಬು, ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ಪತಿರಾಯ 

ಬರೋಬ್ಬರಿ 10 ಕೋಟಿ ಮೌಲ್ಯದ ಆಸ್ತಿ ಪಡೆಯುವ ದುರಾಸೆಗೆ ಖತರ್ನಾಕ್ ಪ್ರಾಧ್ಯಾಪಕನೊಬ್ಬ ಪತ್ನಿಯನ್ನು ಕೊಲೆ ಮಾಡಿರುವ ದಾರುಣ ಘಟನೆ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ

Views: 0

ಮಂಡ್ಯ: ನಗರದ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕನಾಗಿ ಕೆಲಸ ಮಾಡುತ್ತಿದ್ದ ಟಿ.ಎನ್.ಸೋಮಶೇಖರ್(41) ಹಣದ ದಾಹಕ್ಕೆ ಬಿದ್ದು ದಿಂಬು, ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಪತ್ನಿ ಎಸ್.ಶೃತಿ(32)ಯನ್ನು ಕೊಲೆ ಮಾಡಿದ್ದಾನೆ.ಕೊಲೆಗೈದು ಬಳಿಕ ಸಹಜ ಸಾವೆಂದು ಬಿಂಬಿಸಿದ್ದ ಪ್ರಾಧ್ಯಾಪಕನ ನಾಟಕ ಬಯಲು ಮಾಡಿರುವ ನಗರ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಪತ್ನಿ ಶೃತಿ ಅವರು ಮಲಗಿದ್ದ ವೇಳೆ ಮುಖಕ್ಕೆ ದಿಂಬು, ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಇದೊಂದು ಸಹಜ ಸಾವೆಂದು ಬಿಂಬಿಸುವ ಪತಿಯ ಯತ್ನ ಮಾಡಿದ್ದಾರೆ. ಆದರೆ ಯತ್ನ ವಿಫಲವಾಗಿದ್ದು ಜೈಲು ಸೇರಿದ್ದಾರೆ.

ಕೆಲ ವರ್ಷಗಳ ಹಿಂದೆ ಅನಾರೋಗ್ಯದಿಂದ ಶೃತಿ ಅವರ ತಂದೆ, ತಾಯಿ ಸಾವನ್ನಪ್ಪಿದ್ದರು. 2008ರಲ್ಲಿ ಅಪಘಾತದಲ್ಲಿ ಶೃತಿ ತಂಗಿ ಸುಶ್ಮಿತ ಕೂಡ ಮೃತಪಟ್ಟಿದ್ದರು. ಹೀಗಾಗಿ ಮೂವರ ಸಾವಿನ ಬಳಿಕ ಶೃತಿ ಹೆಸರಿಗೆ 10 ಕೋಟಿಗೂ ಹೆಚ್ಚು ಮೌಲ್ಯದ ಅಸ್ತಿ ವರ್ಗಾವಣೆಯಾಗಿತ್ತು. ಮೈಸೂರಿನ ಪ್ರಮುಖ ಪ್ರದೇಶಗಳಲ್ಲಿದ್ದ ಕಮರ್ಷಿಯಲ್ ಬಿಲ್ಡಿಂಗ್ಸ್, ಮನೆ ಹಾಗೂ ನಿವೇಶನಗಳ ಮೇಲೆ ಆರೋಪಿ ಪತಿ ಸೋಮಶೇಖರನ ಕಣ್ಣು ಬಿದ್ದಿತ್ತು. ಆ ಆಸ್ತಿ ಮಾರಲು ಶೃತಿಗೆ ಒತ್ತಾಯಿಸುತ್ತಿದ್ದರು.ಪತ್ನಿಯ ಆಸ್ತಿ ಮಾರಾಟ ಮಾಡಿ ಬೇರೆಡೆ ಅಸ್ತಿ ಖರೀದಿಗೆ ಅರೋಪಿ ಯೋಜನೆ ಹಾಕಿಕೊಂಡಿದ್ದ. ಆದರೆ ಆಸ್ತಿ ಮಾರಾಟ ಮಾಡಲು ಶೃತಿ ನಿರಾಕರಿಸಿದ್ದರು. ಇದೇ ವಿಚಾರಕ್ಕೆ ಹಲವು ಬಾರಿ ಇವರಿಬ್ಬರ ನಡುವೆ ಜಗಳ ನಡೆದಿತ್ತು. ಕಳೆದ ನ.14 ರಂದು ಶೃತಿ ಮಲಗಿದ್ದ ವೇಳೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಪಲ್ಸ್ ರೇಟ್ ಕಮ್ಮಿಯಾಗಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾಳೆಂದು ನಾಟಕವಾಡಿದ್ದಾನೆ. ಮೃತ ಶೃತಿ ಚಿಕ್ಕಪ್ಪನಿಗೆ ಕರೆ ಮಾಡಿ ಸಹಜ ಸಾವೆಂದು ತಿಳಿಸಿದ್ದಾನೆ. ಇದರಿಂದ ಅನುಮಾನಗೊಂಡ ಚಿಕ್ಕಪ್ಪ ಕುಮಾರಸ್ವಾಮಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅನುಮಾನಸ್ಪದ ಸಾವೆಂದು ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದು ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿಸಿ ಸಾಯಿಸಿರುವ ಸತ್ಯ ಬಯಲಾಗಿದೆ.ಬಳಿಕ ಸೋಮಶೇಖರ್ ಬಂಧಿಸಿ ವಿಚಾರಣೆ ನಡೆಸಲಾಗಿದ್ದು ವಿಚಾರಣೆ ವೇಳೆ ತಾನೇ ಕೊಲೆ ಮಾಡಿರೋದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಪತಿಯನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!