ಆರೋಗ್ಯ
ಆಸ್ಪತ್ರೆಯೊಂದರಲ್ಲಿ ವೈದ್ಯರು ನೇಣಿಗೆ ಶರಣು

Views: 127
ಕನ್ನಡ ಕರಾವಳಿ ಸುದ್ದಿ: ವಿಜಯಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಒಬ್ಬರು ವೈದ್ಯರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವೈದ್ಯ ಡಾ. ರಾಜಶೇಖರ್ ಎಂದು ತಿಳಿದುಬಂದಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಡಾ. ರಾಜಶೇಖರ್ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ವೈದ್ಯ ಡಾ. ರಾಜಶೇಖರ್ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ತಾಳಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಪಡಿಸಿಕೊಂಡು ಪರಿಶೀಲಿಸಲಾಗುತ್ತಿದೆ. ಸಿಬ್ಬಂದಿಯನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಸದ್ಯ ಯಾವುದೇ ಡೆತ್‌ನೋಟ್ ಕಂಡುಬಂದಿಲ್ಲವಾದ್ದರಿಂದ ಆತ್ಮಹತ್ಯೆಯ ಕಾರಣ ತಿಳಿಯಲು ಪೊಲೀಸರು ಶೋಧಕ್ಕಿಳಿದಿದ್ದಾರೆ.