ಆರೋಗ್ಯ
ಇಂಜಕ್ಷನ್ ನೀಡಿದ ಕೆಲವೇ ಕ್ಷಣಗಳಲ್ಲಿ ಮಹಿಳೆ ಸಾವು: ಕುಟುಂಬದವರು ಆಸ್ಪತ್ರೆ ಮುಂದೆ ಪ್ರತಿಭಟನೆ
Views: 118
ಕನ್ನಡ ಕರಾವಳಿ ಸುದ್ದಿ: ವೈದ್ಯರ ಎಡವಟ್ಟಿನಿಂದಾಗಿ ಮಹಿಳೆಯೊಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ
ಆಸ್ಪತ್ರೆಗೆ ಬಂದ ಮಹಿಳೆಗೆ ವೈದ್ಯರು ಇಂಜಕ್ಷನ್ ನೀಡುತ್ತಿದ್ದಂತೆ ಕೆಲ ಸಮಯದಲ್ಲೇ ಮಹಿಳೆ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಆಸ್ಪತ್ರೆಯಲ್ಲಿ ನಡೆದಿದೆ. ಅನುಷಾ ಮೃತ ಮಹಿಳೆ.
ಹೃದಯ ಸಂಬಂಧಿ ಕಾಯಿಲೆ ಇದ್ದ ಹಿನ್ನೆಲೆಯಲ್ಲಿ ಮಹಿಳೆ ಅನುಷಾ ಪ್ರತಿ ತಿಂಗಳು ಆಸ್ಪತ್ರೆಗೆ ಬಂದು ಇಂಜಕ್ಷನ್ ಮಾಡಿಸಿಕೊಳ್ಳುತ್ತಿದ್ದರು. ಅದೇ ರೀತಿ ಇಂದು ಬೆಳಿಗ್ಗೆ ಅನುಷ ಅಸಹೋದರನ ಜೊತೆ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ವೈದ್ಯರು ಇಂಜಕ್ಷನ್ ಮಾಡುತ್ತಿದ್ದಂತೆ ಕೆಲ ಸಮಯದಲ್ಲಿಯೇ ಮಹಿಳೆ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ
ವೈದ್ಯರ ಬೇಜವಾಬ್ದಾರಿಯಿಂದ ಅನುಷಾ ಬಲಿಯಾಗಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬದವರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.






