ಇಂಡಿಯನ್ ಬ್ಯಾಂಕ್; 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Views: 163
ಬೆಂಗಳೂರು: ಬ್ಯಾಂಕ್ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್ಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ
ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆ ಇದಾಗಿದ್ದು, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ವಿಶೇಷ ಎಂದರೆ ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 2
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಕರ್ನಾಟಕ-35, ತಮಿಳುನಾಡು / ಪುದುಚೇರಿ-160, ಆಂಧ್ರ ಪ್ರದೇಶ & ತೆಲಂಗಾಣ-50, ಮಹಾರಾಷ್ಟ್ರ-40, ಗುಜರಾತ್-15 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನರಿಗೆ 10 ವರ್ಷ, ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ
ಎಸ್ಸಿ / ಎಸ್ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು 1,000 ರೂ. ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಪಾವತಿ ವಿಧಾನ: ಆನ್ಲೈನ್. ಲಿಖಿತ / ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಮಾಸಿಕ ವೇತನ
ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ.
2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://ibpsonline.ibps.in/iblbojul24/).
ಮೊಬೈಲ್ ನಂಬರ್, ಇಮೇಲ್ ವಿಳಾಸ ನೀಡಿ ಹೆಸರು ನೋಂದಾಯಿಸಿ.
ಹೊಸ ಪಾಸ್ವರ್ಡ್ ಬಳಸಿ ಲಾಗಿನ್ ಆಗಿ.
ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್ಲೋಡ್ ಮಾಡಿ.
ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್ ನಂಬರ್ ಅಥವಾ ರಿಕ್ವೆಸ್ಟ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ ಇಂಡಿಯನ್ ಬ್ಯಾಂಕ್ನ ಅಧಿಕೃತ ವೆಬ್ಸೈಟ್ ವಿಳಾಸ: indianbank.inಗೆ ಭೇಟಿ ನೀಡಿ






