ಇಂದಿನಿಂದ ಗ್ರಹ ಜ್ಯೋತಿ ಪಲಾನುಭವಿಗಳ ಪರಿಶೀಲನೆ.. ಸಿಎಂ ಡಿಕೆಶಿ ಆ ಒಂದು ಹೇಳಿಕೆಗೆ ಗ್ಯಾರಂಟಿ ಗ್ರಾಹಕರು ಶಾಕ್!
Views: 139
ಕನ್ನಡ ಕರಾವಳಿ ಸುದ್ದಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಪ್ರಮುಖ ಮಾಹಿತಿ ಹೊರಬಿದ್ದಿದೆ. ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಮಾಹಿತಿಯನ್ನು ಮರು ಪರಿಶೀಲಿಸಲು ಜುಲೈ 1ರಿಂದ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಆರಂಭಿಸಲಿವೆ.
2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿದ್ದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ವಿವರಗಳನ್ನು ನವೀಕರಿಸುವ ಹಾಗೂ ಅರ್ಹತೆ ದೃಢೀಕರಿಸುವ ಉದ್ದೇಶದಿಂದ ಈ ಪುನರ್ಪರಿಶೀಲನಾ ಅಭಿಯಾನ ಕೈಗೊಳ್ಳಲಾಗಿದೆ. ರಾಜ್ಯದ ಐದು ಎಸ್ಕಾಂಗಳಾದ ಬೆಸ್ಕಾಂ, ಹೆಸ್ಕಾಂ, ಮೆಸ್ಕಾ, ಜೆಸ್ಕಾಂ, ಹಾಗೂ ಸೆಸ್ಕ್ ವ್ಯಾಪ್ತಿಯಲ್ಲಿ ಈ ಕಾರ್ಯ ನಡೆಯಲಿದೆ.
ಜುಲೈ 1ರಿಂದ ಎಸ್ಕಾಂಗಳ ಮೀಟರ್ ರೀಡರ್ಗಳು ಹಾಗೂ ಇತರೆ ಸಿಬ್ಬಂದಿ ಫಲಾನುಭವಿಗಳ ಮನೆಗಳಿಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ನಡೆಸಲಿದ್ದಾರೆ. ಈ ವೇಳೆ ಫಲಾನುಭವಿಗಳ ಮಾಹಿತಿಯನ್ನು ಸಂಗ್ರಹಿಸಿ, ಮೊಬೈಲ್ ಆಪ್ ಹಾಗೂ ಘೋಷಣಾ ಪತ್ರದ ಮೂಲಕ ಅರ್ಜಿ ಭರ್ತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿದ್ದಾರೆ.
ಮನೆಗೆ ಬರುವ ಎಸ್ಕಾಂ ಸಿಬ್ಬಂದಿಗೆ ಫಲಾನುಭವಿಗಳು ಈ ಕೆಳಗಿನ ದಾಖಲೆಗಳನ್ನು ತೋರಿಸಬೇಕಾಗುತ್ತದೆ
ಆಧಾರ್ ಕಾರ್ಡ್
ಫಲಾನುಭವಿಯ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
ಮತದಾರರ ಗುರುತಿನ ಚೀಟಿ
ಪ್ಯಾನ್ ಕಾರ್ಡ್
ರೇಷನ್ ಕಾರ್ಡ್
ಜಾತಿ ಪ್ರಮಾಣ ಪತ್ರ
ಬಾಡಿಗೆ ಒಪ್ಪಂದ ಪತ್ರ (ಅನ್ವಯಿಸುವ ಸಂದರ್ಭಗಳಲ್ಲಿ ಮಾತ್ರ)
ಪರಿಶೀಲನಾ ಕಾರ್ಯ ಸುಗಮವಾಗಿ ನಡೆಯಲು ಗ್ರಾಹಕರು ಹಾಗೂ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳು ಎಸ್ಕಾಂ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡುವಂತೆ ಇಂಧನ ಇಲಾಖೆ ಮನವಿ ಮಾಡಿದೆ. ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು ಸಿಬ್ಬಂದಿಗೆ ಮಾಹಿತಿ ನೀಡುವುದರಿಂದ ಪರಿಶೀಲನೆ ಶೀಘ್ರವಾಗಿ ಪೂರ್ಣಗೊಳ್ಳಲಿದೆ.
ಈ ಮರುಪರಿಶೀಲನೆ ಮೂಲಕ ಯೋಜನೆಯ ಫಲಾನುಭವಿಗಳ ಮಾಹಿತಿಯನ್ನು ನವೀಕರಿಸಿ, ಅರ್ಹರಿಗೆ ಮಾತ್ರ ಯೋಜನೆಯ ಪ್ರಯೋಜನ ನಿರಂತರವಾಗಿ ದೊರೆಯುವಂತೆ ಸರ್ಕಾರ ಕ್ರಮ ಕೈಗೊಂಡಿದೆ.
ಇದೇ ವೇಳೆ ಗ್ಯಾರಂಟಿ ಯೋಜನೆಗಳ ಲಿಂಕ್ ಕುರಿತು ಕಟು ವಾಸ್ತವ ಬಿಚ್ಚಿಟ್ಟ ಸಿಎಂ, ದೇಶದ ಬೇರೆ ರಾಜ್ಯಗಳಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ. ಮತಪರಿಷ್ಕರಣೆ ನಡೆದ ಬಳಿಕ ಬೇರೆ ರಾಜ್ಯಗಳಲ್ಲಿ ಯಾರೆಲ್ಲಾ ತಮ್ಮ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೋ, ಅಂತವರಿಗೆ ಅಲ್ಲಿನ ಸರ್ಕಾರಿ ಯೋಜನೆಗಳ ಲಾಭವನ್ನು ಕಡಿತಗೊಳಿಸಲಾಗಿದೆ. ಒಂದು ವೇಳೆ ಜನರಿಗೆ ಮತದಾನದ ಹಕ್ಕೇ ಇಲ್ಲದೇ ಹೋದರೆ ನಾವು ಅವರಿಗೆ ಯಾಕೆ ಗ್ಯಾರಂಟಿ ಯೋಜನೆಗಳನ್ನು ನೀಡಬೇಕು? ಎಲ್ಲಾದರೂ ಒಂದು ಕಡೆ ಗ್ಯಾರಂಟಿ ಕೊಡಲು ನಿಯಮ ಇರಬೇಕಾಗುತ್ತದೆ ಎಂದು ತೀಕ್ಷ್ಣವಾಗಿ ನುಡಿದರು.
ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಏನಿದ್ದರೂ ಅವು ಕೇವಲ ಕರ್ನಾಟಕದ ಅಧಿಕೃತ ಮತದಾರರು ಮತ್ತು ಕರ್ನಾಟಕದ ನಿವಾಸಿಗಳಿಗೆ ಮಾತ್ರ ಸೀಮಿತವಾಗಿರಲಿವೆ. ಆದ್ದರಿಂದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ತಮ್ಮ ಮನೆಗೆ ಬರುವ ಏನುಮ್ಯುರೇಷನ್ ಫಾರ್ಮ್ ಅನ್ನು ನಿಖರವಾಗಿ ತುಂಬಿಕೊಟ್ಟು, ತಮ್ಮ ಮತದ ಹಕ್ಕನ್ನು ಮತ್ತು ಸರ್ಕಾರದ ಯೋಜನೆಗಳ ಲಾಭವನ್ನು ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿದರು.






