ಇಂದಿನಿಂದ ಬೆಂಗಳೂರಿನಲ್ಲಿ ಭಾರೀ ಮಳೆ: ತಂಪಾದ ಸಿಲಿಕಾನ್ ಸಿಟಿ, ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

Views: 35
ಕನ್ನಡ ಕರಾವಳಿ ಸುದ್ದಿ: ಬಿಸಿಲ ಬೇಗೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೆ ರಾಜ್ಯದಲ್ಲಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯಾಗುತ್ತಿದ್ದು ರಸ್ತೆಗಳಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ. ಏಕಾಏಕಿ ಸುರಿದ ಭಾರೀ ಮಳೆಗೆ ಜನ ಹೈರಾಣಾಗಿ ಹೋಗಿದ್ದಾರೆ. ಇಂದಿನಿಂದ ಇನ್ನೂ ಮೂರು ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಭವಿಷ್ಯ ನುಡಿದಿದೆ.
ಹೌದು ಹವಾಮಾನ ಇಲಾಖೆಯ ಪ್ರಕಾರ ಒಂದು ವಾರ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿದ್ದರಿಂದ ಬೆಂಗಳೂರಿನಲ್ಲಿ ಮಂಗಳವಾರ ತಂಪಾದ ಗಾಳಿಯೊಂದಿಗೆ ಮೋಡ ಕವಿದ ವಾತಾವರಣವಿತ್ತು. ಜೊತೆಗೆ ಕರ್ನಾಟಕದ ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೆ ಬಿಸಿಲಿನ ಬಿಸಿಗೆ ಕಂಗೆಟ್ಟಿರುವ ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ವಿಜಯನಗರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ತುಂತುರು ಮಳೆಯಾಗಲಿದೆ. ರಾಜಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣದ ಬಿಸಿಲು ದಾಖಲಾಗಿದ್ದು, ಅತಿ ಹೆಚ್ಚು ಬಿಸಿಲು ಕಲಬುರಗಿಯಲ್ಲಿ (40.6 ಡಿ.ಸೆ) ದಾಖಲಾಗಿದೆ.