ರಾಜಕೀಯ
ಇಂದು ಕುತೂಹಲ ಮೂಡಿಸಿದ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ ಜಂಟಿ ಸುದ್ದಿಗೋಷ್ಠಿ !
Views: 60
ಕನ್ನಡ ಕರಾವಳಿ ಸುದ್ದಿ :ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ದಿನಾಂಕ 08-11-2025 ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಜಂಟಿಯಾಗಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಪ್ರಸ್ತುತ ನವೆಂಬರ್ ಕ್ರಾಂತಿ ಸುದ್ದಿ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿ ಈ ಇಬ್ಬರ ಪತ್ರಿಕಾಗೋಷ್ಠಿ ಎಲ್ಲರ ಗಮನ ಸೆಳೆದಿದೆ.
ಭಾರತ ಜೋಡೋ ಯಾತ್ರೆ ಬಗ್ಗೆ ಮಾಹಿತಿ ಮತ್ತು 40 ಪರ್ಸೆಂಟ್ ಕಮಿಷನ್ ವಿಚಾರದಲ್ಲಿ ದಾಖಲೆ ಬಿಡುಗಡೆ ಮಾಡಬಹುದು. ಬಿಬಿಎಂಪಿ ಚುನಾವಣೆ, ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಸೇರ್ಪಡೆ, ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಸುರ್ಜೆವಾಲ್ ಭಾಗವಹಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.






