ಜನಮನ

ಇಂದು ರಾಜ್ಯದೆಲ್ಲೆಡೆ ಭಾರೀ ಮಳೆ ಮುನ್ಸೂಚನೆ; ಮುನ್ನೆಚ್ಚರಿಕೆ ಕ್ರಮವಾಗಿ ಈ 22 ಜಿಲ್ಲೆಗಳಿಗೆ ‘ಹಳದಿ ಅಲರ್ಟ್’ 

Views: 147

ಕನ್ನಡ ಕರಾವಳಿ ಸುದ್ದಿ: ಬೇಸಿಗೆಯ ಬಿಸಿಲ ನಡುವೆಯೇ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ಬುಧವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ‘ಹಳದಿ ಅಲರ್ಟ್’ ಘೋಷಿಸಲಾಗಿದೆ.ಒಟ್ಟು 22 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

ಕೇವಲ ಕರ್ನಾಟಕ ಮಾತ್ರವಲ್ಲದೆ. ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಬೆಂಗಳೂರು ದಕ್ಷಿಣ, ಬೆಂಗಳೂರು, ಬೆಂಗಳೂರು ಗ್ರಾಂ. ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಈ ಜಿಲ್ಲೆಗಳಿಗೆ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ದಾವಣಗೆರೆ, ಗದಗ, ವಿಜಯನಗರ, ಬಳ್ಳಾರಿ, ವಿಜಯಪುರ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ

Related Articles

Back to top button
error: Content is protected !!