ಕೃಷಿ

ಇಂದು ರೈತರ ಖಾತೆಗೆ ಪಿಎಂ ಕಿಸಾನ್ 20ನೇ ಕಂತಿನ ಹಣ ಬಿಡುಗಡೆ

Views: 62

ಕನ್ನಡ ಕರಾವಳಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದು, 2,200 ಕೋಟಿ ರೂ. ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಹಲವು ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, ”ಕಾಶಿಯಲ್ಲಿರುವ ನನ್ನ ಕುಟುಂಬ ಸದಸ್ಯರಿಗೆ ವಿಶೇಷ ದಿನವಾಗಿದೆ. ಶಿಕ್ಷಣ, ಆರೋಗ್ಯ, ಕ್ರೀಡೆ, ಪ್ರವಾಸೋದ್ಯಮ ಮತ್ತು ಸಂಪರ್ಕಕ್ಕೆ ಸಂಬಂಧಿಸಿದ ಹಲವಾರು ಯೋಜನೆಗಳನ್ನು ಉದ್ಘಾಟಿಸಿ, ಶಿಲಾನ್ಯಾಸ ಮಾಡಲಿದ್ದೇನೆ. ಇದೇ ವೇಳೆ ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದೇನೆ” ಎಂದಿದ್ದಾರೆ.

ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ, ವಾರಣಾಸಿಯಲ್ಲಿ ವಿವಿಐಪಿಗಳ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗಗಳಲ್ಲಿ ಬಹು ಹಂತದ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಹೇಳಿಕೆ ಪ್ರಕಾರ, ಸುಮಾರು 2,200 ಕೋಟಿ ರೂಪಾಯಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಯೋಜನೆಗಳು ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ರಕ್ಷಣೆ, ಪ್ರವಾಸೋದ್ಯಮ, ನಗರಾಭಿವೃದ್ಧಿ ಮತ್ತು ಸಾಂಸ್ಕೃತಿಕ ಪರಂಪರೆ ಸೇರಿದಂತೆ ಬಹು ವಲಯಗಳಿಗೆ ಪ್ರಯೋಜನವಾಗಲಿವೆ.

ಪ್ರಧಾನಿ ಮೋದಿ ತಮ್ಮ ತವರು ಕ್ಷೇತ್ರದಲ್ಲಿ ಸ್ಮಾರ್ಟ್ ವಿತರಣಾ ಯೋಜನೆಯಡಿ ವಿವಿಧ ಕಾಮಗಾರಿಗಳು ಮತ್ತು ಅಂಡರ್ಗ್ರೌಂಡಿಂಗ್ ವಿದ್ಯುತ್ ಮೂಲಸೌಕರ್ಯಗಳಿಗೆ ಶಂಕು ಸ್ಥಾಪನೆ ನೇರವೇರಿಸಲಿದ್ದಾರೆ.

ಈ ಕಾರ್ಯಕ್ರಮದ ಬಳಿಕ ಸೇವಾಪುರಿ ವಿಧಾನಸಭಾ ಕ್ಷೇತ್ರದ ಬನೌಲಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.

Related Articles

Back to top button