ಶಿಕ್ಷಣ
ಇನ್ಮುಂದೆ ಕರ್ನಾಟಕದ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ :ಸುತ್ತೋಲೆ ಹೊರಡಿಸಿದ ಸರ್ಕಾರ

Views: 224
ಬೆಂಗಳೂರು:ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ ಶಾಲೆ,ಅನುದಾನಿತ ಶಾಲೆ ಮತ್ತು ಖಾಸಗಿ ಶಾಲೆ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿದೆ.
ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತಾರೆ. ಇದರಿಂದ ಮಕ್ಕಳಲ್ಲಿ ಕೀಳರಿಮೆ, ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.