ಇಬ್ಬರು ಮಕ್ಕಳ ಕೊಲೆ ಮಾಡಿ ಜೈಲು ಸೇರಿದ್ದ ತಾಯಿ,ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 100
ಬೆಂಗಳೂರು: ಜಾಲಹಳ್ಳಿಯಲ್ಲಿ ತನ್ನಿಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಆರೋಪಿ ಗಂಗಾದೇವಿ ಶೌಚಾಲಯದಲ್ಲಿ ತನ್ನ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ಕೇಸ್ನಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿದ್ದ ಗಂಗಾದೇವಿ ಜೈಲಿಗೆ ಹೋಗಿದ್ದ ದಿನ ಏಪ್ರಿಲ್ 11 ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲಿನಲ್ಲಿರುವ ಶೌಚಾಲಯಕ್ಕೆ ಹೋಗಿ ಅಲ್ಲಿ ತನ್ನ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್ 13 ರಂದು ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಬಳಿಕ ಶವವನ್ನು ಸಂಬಂಧಿಕರಿಗೆ ಹಸ್ತಾಂತರ ಮಾಡಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಏಪ್ರಿಲ್ 9ರ ರಾತ್ರಿ ಮಗಳು ಲಕ್ಷ್ಮೀ (9), ಮಗ ಗೌತಮ್ (7) ಉಸಿರುಗಟ್ಟಿಸಿ ಹತ್ಯೆ ಮಾಡಿದ್ದ ಗಂಗಾದೇವಿ ಬಳಿಕ ಪೊಲೀಸರಿಗೆ ಫೋನ್ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಳು. ಮಾಹಿತಿ ಪಡೆದ ಪೊಲೀಸರು ತಕ್ಷಣ ಮನೆಗೆ ಹೋಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆಯಲ್ಲಿ ಎಲ್ಲ ಮಾಹಿತಿ ಪಡೆದು ಬಳಿಕ ಆಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಏ.11 ರಂದು ಕಳುಹಿಸಿದ್ದರು. ದುರಂತ ಎಂದರೆ ಅಂದೇ ಜೈಲಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಿಂದಿನ ಘಟನೆಯೇನು?
ಆತ್ಮಹತ್ಯೆ ಮಾಡಿಕೊಂಡ ಗಂಗಾದೇವಿ ಮೂಲತಃ ಆಂಧ್ರ ಪ್ರದೇಶದ ಮೂಲದವರಾಗಿದ್ದು, ಕೊಲೆ ಆರೋಪಿತೆ ಗಂಗಾದೇವಿ ಪತಿ ಪೋಕ್ಸೋ ಕೇಸ್ ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಆರೋಪಿ ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದಳು. ತಾಯಿ ಮಗಳಿಬ್ಬರನ್ನು ದಿಂಬಿನಿಂದ ಕೊಂದು ಹತ್ಯೆ ಮಾಡಿದ್ದಾಳೆ. ನಂತರ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಅವರೇ ಕರೆ ಮಾಡಿ ತಿಳಿಸಿದ್ದಳಂತೆ. ಗಂಗಾದೇವಿಗೆ ಹತ್ತು ವರ್ಷಗಳ ಹಿಂದೆ ಮದುವೆಯಾಗಿತ್ತು. ಆಕೆಯ ಪತಿ ಪೌರಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ. ಆಕೆ ಕೂಡ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಈ ಹಿಂದೆ ಪತಿ ವಿರುದ್ಧ ಮಹಿಳೆ ದೂರು ನೀಡಿದ್ದಳು. ಕಳೆದ ತಿಂಗಳು ಪೋಕ್ಸೋ ಕೇಸ್ ದಾಖಲಾಗಿತ್ತು, ಕೇಸ್ ಸಂಬಂಧ ಕೌನ್ಸಿಲಿಂಗ್ ಮಾಡಿದ್ದೇವು. ನಂತರ ಕಳೆದ ತಿಂಗಳು ಪತಿಯನ್ನು ಅರೆಸ್ಟ್ ಮಾಡಲಾಗಿತ್ತು. ಕೌಟುಂಬಿಕ ಸಮಸ್ಯೆಗೆ ಬೇಸತ್ತು ಈ ರೀತಿ ಮಾಡಿರೋದಾಗಿ ತಿಳಿದು ಬಂದಿದೆ.






