ಇತರೆ

ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ; ಕಾಲುವೆಗೆ ತಳ್ಳಿ ಕೊಲೆ: ಇಬ್ಬರು ಆರೋಪಿಗಳ ಸ್ಥಳ ಮಹಜರು

Views: 194

ಕನ್ನಡ ಕರಾವಳಿ ಸುದ್ದಿ: ಇಸ್ರೇಲ್ ಯುವತಿ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಕಾಲುವೆಗೆ ತಳ್ಳಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಇಬ್ಬರು ಆರೋಪಿಗಳನ್ನು ಪೊಲೀಸರು ರವಿವಾರ ಘಟನಾ ಸ್ಥಳಕ್ಕೆ ಕರೆದೊಯ್ದು ಮಹಜರು ನಡೆಸಿದ್ದಾರೆ.

ಗಂಗಾವತಿ ತಾಲೂಕಿನ ಸಾಯಿನಗರದ ನಿವಾಸಿಗಳಾದ ಮಲ್ಲೇಶ್(22) ಮತ್ತು ಚೇತನ್ ಸಾಯಿ ಸಿಳ್ಳೇಕ್ಯಾತರ್(21) ಎಂಬ ಇಬ್ಬರು ಅರೋಪಿಗಳನ್ನು ಶನಿವಾರ ಬಂಧಿಸಲಾಗಿತ್ತು. ತನಿಖೆಯ ಮುಂದುವರಿದ ಭಾಗವಾಗಿ ಘಟನಾ ಸ್ಥಳಕ್ಕೆ ಇಂದು ಪೊಲೀಸರು ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸಿದರು.

ಪ್ರಕರಣದ ವಿವರ:  ಮೂವರು ದುಷ್ಕರ್ಮಿಗಳು ಇಸ್ರೇಲ್ ಮೂಲದ ಮತ್ತು ತಮಿಳುನಾಡು ಮೂಲದ ಯುವತಿಯರಿಬ್ಬರ ಮೇಲೆ ಹಲ್ಲೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಗುರುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಯುವತಿಯರ ಜೊತೆಗೆ ಇದ್ದ ಮೂವರು ಯುವಕರ ಮೇಲೆ ಕೂಡಾ ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ತಿರದ ಕಾಲುವೆಗೆ ಬಿಸಾಕಿದ್ದರು. ಮೂವರಲ್ಲಿ ಇಬ್ಬರು ಈಜಿ ಬಚಾಗಿದ್ದು, ಒಬ್ಬ ಯುವಕನ ಶರೀರ ಶನಿವಾರ ಪತ್ತೆಯಾಗಿದೆ ಎಂದು ಪೊಲೀಸರು ನಾನುಗೌರಿ.ಕಾಂಗೆ ತಿಳಿಸಿದ್ದಾರೆ. ಗಂಗಾವತಿಯಲ್ಲಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಕೆರೆ ಬಳಿ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ರಾತ್ರಿ ಸುಮಾರು 10 ಗಂಟೆಯ ನಂತರ ನಕ್ಷತ್ರ ವೀಕ್ಷಣೆಗೆ ತೆರಳಿ ಗಿಟಾರ್ ಬಾರಿಸುತ್ತ ಕುಳಿತಿದ್ದ ಇಬ್ಬರು ವಿದೇಶಿ ಪ್ರಜೆಗಳು ಹಾಗೂ ಮೂವರು ದೇಶಿಯ ಪ್ರವಾಸಿಗರ ಮೇಲೆ ಗುರುವಾರ ತಡರಾತ್ರಿ ಮೂವರ ಗುಂಪು ಹಲ್ಲೆ ನಡೆಸಿದ್ದಲ್ಲದೇ, ತಂಡದಲ್ಲಿದ್ದ ಮೂವರು ಯುವಕರನ್ನು ಕಾಲುವೆಗೆ ದೂಡಿ ಇಬ್ಬರು ಯುವತಿಯರ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.

ಗುರುವಾರ ತಡರಾತ್ರಿ ಸಾನಾಪುರ ಬಳಿಯ ಹನುಮನಹಳ್ಳಿ ಸಮೀಪದ ದುರ್ಗಮ್ಮ ಗುಡಿಯ ಬಳಿಯಲ್ಲಿರುವ ತುಂಗಭದ್ರಾ ಕಾಲುವೆ ಸಮೀಪ ಕೂತು ನಕ್ಷತ್ರ ವೀಕ್ಷಣೆಗೆಂದು ಒಬ್ಬ ಅಮೆರಿಕದ ಯುವಕ, ಇಸ್ರೇಲ್‌ನ ಯುವತಿ ಹಾಗೂ ಭಾರತದ ಇಬ್ಬರು ಪ್ರವಾಸಿಗರೊಂದಿಗೆ ಸ್ಥಳೀಯವಾಗಿ ಹೋಮ್ ಸ್ಟೇ ನಡೆಸುತ್ತಿರುವ ಯುವತಿ ಕೂಡ ತೆರಳಿದ್ದರು. ಗಂಗಾವತಿಯಲ್ಲಿ

ಈ ವೇಳೆ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು, ‘ಪೆಟ್ರೋಲ್ ಬಂಕ್ ಎಲ್ಲಿದೆ?’ ಎಂದು ಕನ್ನಡದಲ್ಲಿ ಸ್ಥಳೀಯ ಯುವತಿಯೊಂದಿಗೆ ಪ್ರಶ್ನಿಸಿದ್ದಾರೆ‌.‌ ಈ ವೇಳೆ ಉತ್ತರಿಸಿದ್ದ ಯುವತಿ, ಸಾನಾಪುರಕ್ಕೆ ಹೋಗುವಂತೆ ಸಲಹೆ ನೀಡಿದ್ದಾರೆ. ಆದರೆ, ಆ ಬಳಿಕವೂ ಅಲ್ಲಿಂದ ಕದಲದೆ, ₹100 ಕೊಡುವಂತೆ ಒತ್ತಾಯಿಸಿದ್ದಾರೆ.

ನಮ್ಮಲ್ಲಿ ದುಡ್ಡಿಲ್ಲ ಎಂದು ಸಮಜಾಯಿಷಿ ನೀಡಿದಾಗ ತಗಾದೆ ತೆಗೆದ ಮೂವರು ದುಷ್ಕರ್ಮಿಗಳು, ತಂಡದಲ್ಲಿದ್ದ ವಿದೇಶಿ ಯುವಕನ ಸಹಿತ ಮೂವರು ಯುವಕರಿಗೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ. ಆ ಬಳಿಕ ಕಾಲುವೆಗೆ ದೂಡಿ ಹಾಕಿದ್ದಾರೆ ಎಂದು ತಿಳಿದು ಬಂದಿದೆ. ಯುವಕರನ್ನು ಕಾಲುವೆಗೆ ದೂಡಿ ಹಾಕಿದ ಬಳಿಕ ವಿದೇಶಿ ಯುವತಿ ಹಾಗೂ ಸ್ಥಳೀಯ ಯುವತಿಗೂ ಕಲ್ಲಿನಿಂದ ತಲೆಗೆ ಹಲ್ಲೆ ನಡೆಸಿದ್ದಲ್ಲದೇ, ಇಬ್ಬರನ್ನೂ ಅತ್ಯಾಚಾರಗೈದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಗಂಗಾವತಿಯಲ್ಲಿ

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕನ ಸಹಿತ ಇಬ್ಬರು ಭಾರತೀಯ ಪ್ರವಾಸಿಗರ ಪೈಕಿ ಓರ್ವ ಯುವಕ ಹಾಗೂ ವಿದೇಶಿ ಪ್ರವಾಸಿಗ ಈಜಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಆದರೆ, ಇನ್ನೊಬ್ಬ ಯುವಕ ಶುಕ್ರವಾರದ ವರೆಗೂ ಪತ್ತೆಯಾಗಿರಲಿಲ್ಲ. ಶನಿವಾರ ಅವರ ಶರೀರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತ ಇಸ್ರೇಲ್‌ ಪ್ರಜೆಯಾದ ಯುವತಿಯು 27 ವರ್ಷದವರಾಗಿದ್ದು, ಇನ್ನೊಬ್ಬ ಯುವತಿಯು 29 ವರ್ಷದ ತಮಿಳುನಾಡು ಮೂಲದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ವಾಸಿಸುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎಂದು ಸಂತ್ರಸ್ತ ಸ್ಥಳೀಯ ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕಾಲುವೆಗೆ ಬಿದ್ದಿದ್ದ ವಿದೇಶಿ ಯುವಕರಲ್ಲಿ ಒಬ್ಬರು ಅಮೆರಿಕದವರಾಗಿದ್ದು, ಇನ್ನೊಬ್ಬ ಯುವಕ ಮಹಾರಾಷ್ಟ್ರ ಮೂಲದವರಾಗಿದ್ದಾರೆ ಎಂದು ಪೊಲೀಸರು ಗುರುತಿಸಿದ್ದಾರೆ. ಸದ್ಯ ಕಾಲುವೆಗೆ ಬಿದ್ದು ಬಳಿಕ ನಾಪತ್ತೆಯಾಗಿದ್ದ ಯುವಕ ಒಡಿಶಾ ರಾಜ್ಯದ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ನಗರಠಾಣೆ ಪೊಲೀಸ್‌ ಇನ್‌ಸ್ಪೆಕ್ಟರ್ ಪ್ರಕಾಶ್ ಮಾಳೆ, ಶ್ವಾನದಳ ಬಂದಿದ್ದು ತಪಾಸಣೆ ನಡೆಸಿದ್ದಾರೆ.

 

Related Articles

Back to top button