ಕರಾವಳಿ
ಉಜಿರೆಯಲ್ಲಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವು

Views: 105
ಬೆಳ್ತಂಗಡಿ : ಉಜಿರೆಯಲ್ಲಿ ಬೆಳ್ಳಂಬೆಳಗ್ಗೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿರುವ ಘಟನೆ ಉಜಿರೆಯಲ್ಲಿ ಸಂಭವಿಸಿದೆ.
ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂದು ತಿಳಿದುಬಂದಿದೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತದ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.






